ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಬಿಬಿಎಂಪಿ: 1,322 ಆಶಾ ಕಾರ್ಯಕರ್ತೆಯರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಗೆ ಹೆಚ್ಚುವರಿಯಾಗಿ 1,322 ಆಶಾ ಕಾರ್ಯಕರ್ತೆಯರ ಹುದ್ದೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಜೂರು ಮಾಡಿದೆ. ಇದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರ ಸಂಖ್ಯೆ 2,551ಕ್ಕೆ ಹೆಚ್ಚಲಿದೆ.

ಪ್ರತಿ 5 ಸಾವಿರ ಜನರಿಗೆ ಒಬ್ಬರು ಆಶಾ ಕಾರ್ಯಕರ್ತೆಯನ್ನು ನೇಮಿಸಲಾಗುತ್ತದೆ. ಬಿಪಿಎಂಪಿ ವ್ಯಾಪ್ತಿಯಲ್ಲಿ ಪ್ರಸ್ತುತ 1.27 ಕೋಟಿ ಜನಸಂಖ್ಯೆ ಇದೆ ಎಂದು ಅಂದಾಜಿಸಲಾಗಿದೆ. ಈ ಪ್ರಕಾರ ಇಲ್ಲಿಗೆ 2,551 ಆಶಾ ಕಾರ್ಯಕರ್ತೆಯರ ಅಗತ್ಯವಿದೆ.

‘ರಾಷ್ಟ್ರಿಯ ನಗರಾರೋಗ್ಯ ಅಭಿಯಾನದ ಅಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1229 ಆಶಾ ಕಾರ್ಯಕರ್ತೆಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿವೆ. ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾದುದು. ಹಾಗಾಗಿ ಅವರ ಮೇಲೆ ಕೆಲಸದ ಒತ್ತಡ ಹೆಚ್ಚು ಇದೆ. ಹೊಸ ಹುದ್ದೆಗಳು ಮಂಜೂರಾಗಿರುವುದರಿಂದ ಅವರ ಮೇಲಿನ ಕೆಲಸದ ಒತ್ತಡ ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದೆ’ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು