27ರಂದು ಬಿಬಿಎಂಪಿ ಬಜೆಟ್
‘ಬಿಬಿಎಂಪಿ ಬಜೆಟ್ ಅನ್ನು ಮಾರ್ಚ್ 27ರಂದು ಮಂಡಿಸಲಾಗುತ್ತದೆ. ಆಡಳಿತಾಧಿಕಾರಿಯವರು ನಗರದ ಎಲ್ಲ ಶಾಸಕರಿಗೆ ಆಹ್ವಾನ ನೀಡಿದ್ದು, 24ರಂದು ಸಭೆ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಸಭೆಯಲ್ಲಿ ಭಾಗವಹಿಸುತ್ತಾರೆ’ ಎಂದು ತುಷಾರ್ ಗಿರಿನಾಥ್ ತಿಳಿಸಿದರು. ‘ಕಸ ನಿರ್ವಹಣೆಗೆ ಬಳಕೆದಾರರ ಶುಲ್ಕ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ವಾಣಿಜ್ಯ ಕಟ್ಟಡಗಳಿಗೆ ಸಂಬಂಧಿಸಿದಂತೆ ಗೊಂದಲ ಇದೆ. ದಿನಸಿ ಅಂಗಡಿ, ತರಕಾರಿ ಮಳಿಗೆ, ಹೋಟೆಲ್‌ಗೆ ಒಂದೇ ರೀತಿಯಲ್ಲಿ ಶುಲ್ಕ ವಿಧಿಸಲು ಸಾಧ್ಯವಿಲ್ಲ. ಹೀಗಾಗಿ, ಈ ಬಗ್ಗೆ ಒಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದರು.