ಶಾಸಕರು, ಸಂಸದರ ಜೊತೆ ಜಿ. ಪರಮೇಶ್ವರ ಉಪಾಹಾರ ಕೂಟ

ಬುಧವಾರ, ಮೇ 22, 2019
24 °C

ಶಾಸಕರು, ಸಂಸದರ ಜೊತೆ ಜಿ. ಪರಮೇಶ್ವರ ಉಪಾಹಾರ ಕೂಟ

Published:
Updated:

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಬೆಂಗಳೂರಿಗೆ ಸಂಬಂಧಪಟ್ಟ ಹಾಗೇ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಬರುತ್ತಿದ್ದು, ಈ ಬಗ್ಗೆ ಚರ್ಚಿಸಲು  ಬೆಂಗಳೂರಿನ ಎರಡೂ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಉಪಹಾರಕೂಟದಲ್ಲಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರು, ವಿಧಾನಪರಿಷತ್ತಿನ ಸದಸ್ಯರು, ಮೇಯರ್ ಹಾಗೂ ಉಪಮೇಯರ್‌ ಪಾಲ್ಗೊಂಡಿದ್ದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಎರಡೂ ಪಕ್ಷದ ಕಾರ್ಪೋರೇಟರ್‌ಗಳ ಜೊತೆ ಅನ್ಯೋನ್ಯತೆಯಿಂದ ಕೆಲಸ ಮಾಡುವಂತೆ ಎಲ್ಲ ಶಾಸಕರಿಗೆ ಸೂಚಿಸಿದ್ದೇನೆ.‌ ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಶಾಸಕರು, ಸಂಸದರು ಮೇಯರ್ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೆ’ ಎಂದರು.

ಇದನ್ನೂ ಓದಿ... ವಿಶ್ವನಾಥ್‌ ಹೇಳಿಕೆ, ಕಾಂಗ್ರೆಸ್‌ ಮುಖಂಡರ ಪ್ರತಿಕ್ರಿಯೆ; ಪರಮೇಶ್ವರ ಗರಂ

ಬಿಬಿಎಂಪಿ ಬಜೆಟ್ ಸರ್ಕಾರದ ಮಟ್ಟದಲ್ಲಿ ಬಂದಿದೆ ಅದಕ್ಕೂ ಕೂಡ ಕೆಲವೇ‌ ದಿನಗಳಲ್ಲಿ ಒಪ್ಪಿಗೆ ಸಿಗಲಿದೆ.  ಬಿಬಿಎಂಪಿ ವ್ಯಾಪ್ತಿಯಲ್ಲಿ  ಆಸ್ಪತ್ರೆ , ಪಾರ್ಕ್, ಕ್ರೀಡಾ ಚಟುವಟಿಕೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಲು ಸದಸ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಹೊಸದಾಗಿ ನಾಲ್ಕು ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಲು ಅಭಿಪ್ರಾಯ ತಿಳಿಸಿದ್ದಾರೆ. ಈ ಎಲ್ಲಾ ಅಭಿಪ್ರಾಯವನ್ನು ಪರಿಗಣಿಸಿದ್ದೇವೆ’ ಎಂದು ಹೇಳಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !