ಬುಧವಾರ, ಡಿಸೆಂಬರ್ 8, 2021
28 °C

ಬಿಬಿಎಂಪಿ ಚುನಾವಣೆಗೆ ತಯಾರಿ: ಆರ್. ಅಶೋಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೊಮ್ಮನಹಳ್ಳಿ: ‘ಬಿಬಿಎಂಪಿ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ಸಿಲ್ಕ್‌ಬೋರ್ಡ್‌ ಸಂಚಾರ ದಟ್ಟಣೆಗೆ ಪರಿಹಾರ ನೀಡುವ ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ಬೈಪಾಸ್‌ ರಸ್ತೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ಬಿಬಿಎಂಪಿ ಮಸೂದೆ ಬಗ್ಗೆ ಚರ್ಚಿಸಲು ಜಂಟಿ ಸಲಹಾ ಸಮಿತಿ ರಚನೆ ಮಾಡಲಾಗಿದೆ. ವಾರ್ಡ್‌ಗಳ ಪುನಾರಚನೆಯಂತಹ ಕಾರ್ಯಗಳು ಅಧಿಕಾರಿಗಳಿಗೆ ಸಂಬಂಧಿಸಿದ್ದು’ ಎಂದರು.

‘ಬೊಮ್ಮನಹಳ್ಳಿ– ಬಿ.ಟಿ.ಎಂ ಲೇಔಟ್‌ ರಸ್ತೆ ನಿರ್ಮಾಣದ ಮೊದಲ ಹಂತ ಪೂರ್ಣವಾಗಿದೆ. ಬೆಂಗಳೂರು ನಗರ ನಿರೀಕ್ಷೆಗೂ ಮೀರಿ ಬೆಳೆಯುತ್ತಿದೆ. ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ಶ್ರಮ ವಹಿಸುತ್ತಿದೆ’ ಎಂದರು.

‘ಬೊಮ್ಮಹಳ್ಳಿ ಹಾಗೂ ಬಿಟಿಎಂ ಪ್ರದೇಶದ ಜನರ ಅನುಕೂಲಕ್ಕಾಗಿ ಗುಣಮಟ್ಟದ ರಸ್ತೆ ನಿರ್ಮಿಸಲಾಗಿದೆ’ ಎಂದು ಉಪಮೇಯರ್ ಸಿ.ಆರ್.ರಾಮಮೋಹನ್ ರಾಜು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು