ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಜಾಹೀರಾತು ನಿಯಮದಲ್ಲಿ ಖಾಸಗಿಯವರಿಗೆ ಅನುಕೂಲ?

ಬಿಬಿಎಂಪಿಯಿಂದ ವರದಿ ಕೇಳಿದ ನಗರಾಭಿವೃದ್ಧಿ ಇಲಾಖೆ
Last Updated 17 ಸೆಪ್ಟೆಂಬರ್ 2021, 16:35 IST
ಅಕ್ಷರ ಗಾತ್ರ

ಬೆಂಗಳೂರು:ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಸ್ಥಳ ಅಥವಾ ಕಟ್ಟಡಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಬಿಬಿಎಂಪಿಯು ಅವಕಾಶ ನೀಡಿದೆ. ಆದರೆ, ಈ ಕುರಿತು ಒಪ್ಪಂದ ಮಾಡಿಕೊಳ್ಳುವಾಗ ಖಾಸಗಿಯವರಿಗೆ ಅನುಕೂಲ ಮಾಡಿಕೊಟ್ಟಿರುವ ಅನುಮಾನವಿದ್ದು, ಈ ಬಗ್ಗೆ 7 ದಿನಗಳೊಳಗೆ ವರದಿ ನೀಡಬೇಕು ಎಂದು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೆ.16ರಂದು ಸೂಚನೆ ನೀಡಿದೆ.

ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಯೋಜನೆಗಳಿಗೆ ಸಂಬಂಧಿಸಿದಂತೆ ಜಾಹೀರಾತು ಹಕ್ಕು ಪಡೆದಿರುವ ಖಾಸಗಿ ಸಂಸ್ಥೆಗಳು ಟೆಂಡರ್‌ ನಿಯಮಗಳನ್ನು ಮತ್ತು ಪ್ರಚಲಿತ ಸಂಚಾರ ಮತ್ತು ಜಾಹೀರಾತು ನಿಯಮಗಳನ್ನು ಉಲ್ಲಂಘಿಸಿ ಮನಸೋ ಇಚ್ಚೆ ಜಾಹೀರಾತು ಫಲಕಗಳನ್ನು ಪ್ರದರ್ಶಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದೂ ಇಲಾಖೆ ಹೇಳಿದೆ.

ಖಾಸಗಿಯವರೊಡನೆ ಕಡ್ಡಾಯವಾಗಿ ಟೆಂಡರ್ ನಿಯಮಗಳಂತೆಯೇ ಒಪ್ಪಂದ ಮಾಡಿಕೊಳ್ಳಲಾಗಿದೆಯೆ ಅಥವಾ ಸದರಿ ನಿಯಮಗಳನ್ನು ಅಧಿಕಾರಿಗಳ ಹಂತದಲ್ಲಿ ಬದಲಾಯಿಸಿ ಖಾಸಗಿಯವರಿಗೆ ಅನುಕೂಲ ಮಾಡಿಕೊಡಲಾಗಿದೆಯೇ ಎಂಬುದರ ಬಗ್ಗೆಯೂ ವರದಿ ನೀಡಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT