ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹12 ಕೋಟಿ ವೆಚ್ಚದಲ್ಲಿ ಹಫಿಜಿಯಾ ಶಾಲೆ ನವೀಕರಣ

Last Updated 18 ಸೆಪ್ಟೆಂಬರ್ 2021, 17:45 IST
ಅಕ್ಷರ ಗಾತ್ರ

ಬೆಂಗಳೂರು: ಶಿವಾಜಿನಗರದಲ್ಲಿರುವ ಹಫಿಜಿಯಾ ಶಾಲೆಯನ್ನು ₹12 ಕೋಟಿ ವೆಚ್ಚದಲ್ಲಿ ನವೀಕರಿಸುವ ಕಾಮಗಾರಿಗೆ ಶಾಸಕ ರಿಜ್ವಾನ್ ಅರ್ಷದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಶನಿವಾರ ಚಾಲನೆ ನೀಡಿದರು.

‘ಬಿಬಿಎಂಪಿಯು ಹಫಿಜಿಯಾ ಶಾಲೆ ನವೀಕರಿಸುವುದರಿಂದ ಮತ್ತು ನೂತನ ಕಟ್ಟಡ ನಿರ್ಮಿಸುವುದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಶಾಲೆಗೆ 100ಕ್ಕೂ ಅಧಿಕ ವರ್ಷಗಳ ಇತಿಹಾಸವಿದೆ. ಈ ಶಾಲೆಯನ್ನು ಬೆಂಗಳೂರಿನ ಸರ್ಕಾರಿ ಶಾಲೆಗಳ ಪೈಕಿ ಮೊದಲನೇ ಸ್ಥಾನದಲ್ಲಿ ನಿಲ್ಲುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ರಿಜ್ವಾನ್ ಅರ್ಷದ್ ತಿಳಿಸಿದರು.

‘ಬಿಬಿಎಂಪಿ ವತಿಯಿಂದ ನಿರ್ಮಿಸುವ ಶಾಲಾ ಕಟ್ಟಡದ ನೀಲನಕ್ಷೆ ನೋಡಿದಾಗಲೇ ಇದು ಅಂತರರಾಷ್ಟ್ರೀಯ ಗುಣಮಟ್ಟದ್ದು ಎಂಬುದು ಮನದಟ್ಟಾಗುತ್ತದೆ. ಎಜುಕೇಷನ್ ಡಿಸೈನ್ ಇಂಟರ್‌ನ್ಯಾಷನಲ್ ಸಂಸ್ಥೆಯು ಶಾಲಾ ಕಟ್ಟಡದ ವಿನ್ಯಾಸ ಸಿದ್ಧಪಡಿಸಿದ್ದಾರೆ. ಇದಕ್ಕೆ ಯಾವುದೇ ಹಣ ಪಡೆದಿಲ್ಲ’ ಎಂದು ಹೇಳಿದರು.

ಗೌರವ್ ಗುಪ್ತ,‘ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 9ರಿಂದ 12 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದರು.

ವಲಯ ಆಯುಕ್ತ ಮನೋಜ್ ಜೈನ್, ವಲಯದ ಜಂಟಿ ಆಯುಕ್ತರಾದ ಪಲ್ಲವಿ, ಕಾರ್ಯನಿರ್ವಾಹಕ ಎಂಜಿನಿಯರ್ ಸೈಫುದ್ದೀನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT