ಪಾಲಿಕೆ ಬಜೆಟ್ ತಡೆದಿಲ್ಲ: ಅಶೋಕ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ಗೆ ಮುಖ್ಯಮಂತ್ರಿ ತಡೆ ನೀಡಿಲ್ಲ. ಹೆಚ್ಚುವರಿಯಾಗಿ ಬಜೆಟ್ ಸಿದ್ಧಪಡಿಸಿದ್ದರಿಂದ ತಡೆ ನೀಡಲಾಗಿದೆ ಎಂದು ಶಾಸಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಮೊದಲಿಗೆ 9 ಸಾವಿರ ಕೋಟಿ ಮೊತ್ತದ ಬಜೆಟ್ ರೂಪಿಸಿದ್ದು, ನಂತರ ಅದನ್ನು 13 ಸಾವಿರ ಕೋಟಿಗೆ ಹೆಚ್ಚಳ ಮಾಡಲಾಗಿದೆ. ಹೆಚ್ಚುವರಿ ಬಜೆಟ್ಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ಬುಧವಾರ ಬೆಂಗಳೂರು ಅಭಿವೃದ್ಧಿ ಕುರಿತು ನಡೆದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ತಡೆ ನೀಡಿಲ್ಲ. ಗುಣಮಟ್ಟ ಇಲ್ಲದ ಮತ್ತು ಕಳಪೆ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಮೈತ್ರಿ ಸರ್ಕಾರದ ಕೊನೆ ದಿನಗಳಲ್ಲಿ ಅನುಮೋದನೆ ನೀಡಿದ ಯೋಜನೆಗಳಿಗೆ ತಡೆ ನೀಡಲಾಗಿದೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.