ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಸಂಬಂಧ ವಿಧಾನಗಳನ್ನು ರೂಪಿಸಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಮತ್ತು ಬೆಸ್ಕಾಂ ಮಾಹಿತಿ ನೀಡಿವೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎಂ.ಬಿ. ರಾಜೇಶಗೌಡ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಪ್ರಮಾಣಪತ್ರ ಸಲ್ಲಿಸಿದ್ದಾರೆ. ವಿದ್ಯುತ್ ಉಪಕರಣ ಅಥವಾ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ಅನುಕೂಲಕರ ಸ್ಥಳಗಳನ್ನು ಗುರುತಿಸುವ ಉದ್ದೇಶದಿಂದ ಸಮಿತಿ ರಚಿಸಲಾಗುತ್ತಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಜನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಸುಮಾರು 800 ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಿಸುವ ಕೆಲಸ ನಡೆಯುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಆಗುತ್ತಿರುವ ಅನಾನುಕೂಲ ತಪ್ಪಿಸಲು ಸಮಾಲೋಚನೆ ಪ್ರಕ್ರಿಯೆ ಕೂಡಲೇ ಆರಂಭಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

ಈ ಪ್ರಕ್ರಿಯೆಗೆ ಸಮಯಾವಕಾಶ ನೀಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಎರಡು ಪ್ರಾಧಿಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪರಿಶೀಲನೆಗೆ ಸೂಕ್ತ ಏಜೆನ್ಸಿ ನೇಮಿಸಲಾಗುವುದು ಎಂದು ತಿಳಿಸಿತು.

ಪಾದಚಾರಿ ಮಾರ್ಗಗಳಲ್ಲಿ ಇರುವ ಅಪಾಯಕಾರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲು ನಿರ್ದೇಶನ ನೀಡಲು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.