ಬೆಂಗಳೂರು: ನಗರದಲ್ಲಿರುವ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು 240 ವೈದ್ಯರು ಸಹಿತ ಒಟ್ಟು 578 ವೈದ್ಯಕೀಯ ಸಿಬ್ಬಂದಿಯನ್ನು ಬಿಬಿಎಂಪಿ ನೇಮಿಸಿದೆ.

ವೈದ್ಯಕೀಯ ಸಿಬ್ಬಂದಿಯ ನೇಮಕಕ್ಕಾಗಿ ಪುರಭವನದಲ್ಲಿ ನೇರ ಸಂದರ್ಶನ ನಡೆಸಲಾಗಿತ್ತು. ಎಂಬಿಬಿಎಸ್ ವೈದ್ಯರು, ದಂತ ವೈದ್ಯರು, ಆಯುಷ್ ವೈದ್ಯರು ಸೇರಿ 94 ವೈದ್ಯರನ್ನು ಹಾಗೂ ಶುಶ್ರೂಷಕರು, ಸಹಾಯಕ ಸಿಬ್ಬಂದಿ ಹಾಗೂ ಡಿ ಗುಂಪಿನ ಸಿಬ್ಬಂದಿ ಸೇರಿ 87 ಸಿಬ್ಬಂದಿಯನ್ನು ಶುಕ್ರವಾರ ಆಯ್ಕೆ ಮಾಡಲಾಗಿತ್ತು.

146 ವೈದ್ಯರು ಹಾಗೂ ಶುಶ್ರೂಷಕರು, ಸಹಾಯಕ ಸಿಬ್ಬಂದಿ ಹಾಗೂ ಡಿ ಗುಂಪಿನ ಸಿಬ್ಬಂದಿ ಸೇರಿ 251 ಮಂದಿಯನ್ನು ಸೋಮವಾರ ಆಯ್ಕೆ ಮಾಡಲಾಗಿದೆ.

‘ಆಯ್ಕೆ ಆದವರೆಲ್ಲರಿಗೂ ಆದೇಶ ಪತ್ರ ನೀಡಲಾಗಿದೆ. ಶೀಘ್ರವೇ ಇವರನ್ನು ನಿರ್ದಿಷ್ಟ ಕೋವಿಡ್ ಆರೈಕೆ ಕೇಂದ್ರಗಳಿಗೆ ನಿಯೋಜಿಸಲಾಗುವುದು’ ಎಂದು ಬಿಬಿಎಂಪಿಯ ವಿಶೇಷ ಆಯುಕ್ತ (ಆಡಳಿತ) ಅನ್ಬುಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.