ಸೋಮವಾರ, ಮಾರ್ಚ್ 27, 2023
22 °C

ಬೆಂಗಳೂರು: ರೇಸ್‌ಕೋರ್ಸ್‌ ರಸ್ತೆಗೆ ಅಂಬರೀಶ್‌ ಹೆಸರಿಡಲು ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೇಸ್‌ಕೋರ್ಸ್‌ ರಸ್ತೆಗೆ ನಟ ಅಂಬರೀಶ್‌ ಹೆಸರನ್ನಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಅನುಮೋದನೆ ನೀಡಿದ್ದಾರೆ.

ರೇಸ್‌ಕೋರ್ಸ್‌ ರಸ್ತೆಯ ರಾಂನಾರಾಯಣ್‌ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್‌ ವೃತ್ತದವರೆಗಿನ ರಸ್ತೆಗೆ ಅಂಬರೀಶ್‌ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಘೋಷಿಸಿದ್ದರು.

ಈ ಪ್ರಸ್ತಾವನೆಯನ್ನು ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಅವರಿಗೆ ಪೂರ್ವ ವಲಯದ ಜಂಟಿ ಆಯುಕ್ತರು ಕಳುಹಿಸಿದ್ದರು. ತುರ್ತಾಗಿ ನಾಮಕರಣ ಮಾಡುವುದು ಅವಶ್ಯವಾಗಿರುವುದರಿಂದ, ಬಿಬಿಎಂಪಿ ಕಾಯ್ದೆಯಂತೆ ಅನುಮೋದನೆ ನೀಡಬೇಕೆಂದು ಕೋರಿದ್ದರು. ಮಾರ್ಚ್‌ 14ರಂದು ಪೂರ್ವ ವಲಯದ ಆಯುಕ್ತರು ಟಿಪ್ಪಣಿಯನ್ನು ಆಡಳಿತಾಧಿಕಾರಿಯವರ ಮುಂದಿರಿಸಿದ್ದರು. ರೇಸ್‌ಕೋರ್ಸ್‌ ರಸ್ತೆಗೆ ಅಂಬರೀಶ್‌ ಹೆಸರಿಡುವ ಕಾರ್ಯಕ್ರಮ ವಾರದಲ್ಲೇ ನಡೆಯಲಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು