ಗುರುವಾರ , ಆಗಸ್ಟ್ 11, 2022
23 °C

ಹೆಬ್ಬಾಳ: ಕೆರೆ ಮೀಸಲು ಪ್ರದೇಶದ ಶೆಡ್‌ ತೆರವಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೆಬ್ಬಾಳ ಕೆರೆಯ ಮೀಸಲು ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಶೆಡ್ ತೆರವುಗೊಳಿಸುವಂತರೆ ಬಿಬಿಎಂಪಿ ಅಧಿಕಾರಿಗಳು ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಕೆರೆ ಪಕ್ಕದ ಜಾಗವು ಕಂದಾಯ ಇಲಾಖೆ ದಾಖಲೆ ಪ್ರಕಾರ ಖಾಸಗಿ ಸ್ವತ್ತು. ಆದರೆ, ಅರಣ್ಯ ಇಲಾಖೆಯ ದಾಖಲೆ ಪ್ರಕಾರ ಕೆರೆಯ ಮೀಸಲು ಪ್ರದೇಶವಾಗಿದೆ. ಈ ಬಗ್ಗೆ ಬಿಬಿಎಂಪಿಯ ಕಂದಾಯ ವಿಭಾಗ, ಅರಣ್ಯ ಇಲಾಖೆ ಹಾಗೂ ಕೆರೆ ಸಂರಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಅಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಶೆಡ್‌ ನಿರ್ಮಿಸಿದ್ದ ಸ್ವಲ್ಪ ಜಾಗವು ಕೆರೆಯ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿತ್ತು.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ‘ಹೆಬ್ಬಾಳ ಕೆರೆಯ ಮೀಸಲು ಪ್ರದೇಶದಲ್ಲಿ ಶೆಡ್‌ ನಿರ್ಮಿಸಿದ ಖಾಸಗಿ ವ್ಯಕ್ತಿಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.