ಕೆ.ಆರ್.ಮಾರುಕಟ್ಟೆ: ಅಗ್ನಿ ಸುರಕ್ಷತೆಗೆ ಕ್ರಮ

7
ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ

ಕೆ.ಆರ್.ಮಾರುಕಟ್ಟೆ: ಅಗ್ನಿ ಸುರಕ್ಷತೆಗೆ ಕ್ರಮ

Published:
Updated:

ಬೆಂಗಳೂರು: ‘ಕೆ.ಆರ್.ಮಾರುಕಟ್ಟೆಯ ಪಾಲಿಕೆ ಕಟ್ಟಡದಲ್ಲಿ ಅಗ್ನಿ ಸುರಕ್ಷಾ ಕ್ರಮ ಕೈಗೊಳ್ಳಲಾಗುವುದು’ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತಂತೆ ‘ಬೆಂಗಳೂರು ಹೂ ವ್ಯಾಪಾರಿಗಳ ಸಂಘ ಹಾಗೂ ಉಪಕರಣ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘ’ದ ಕಾರ್ಯದರ್ಶಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಇವತ್ತಷ್ಟೇ (ಗುರುವಾರ) ಉಪ ಮುಖ್ಯಮಂತ್ರಿ ಮಾರುಕಟ್ಟೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಸಮಗ್ರ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರಿಗೆ ಸುರಕ್ಷತೆ ಕಲ್ಪಿಸುವ ವಿಚಾರದಲ್ಲಿ ಬಿಬಿಎಂಪಿ ಕ್ರಮ ಜರುಗಿಸುತ್ತಿದೆ. ಅರ್ಜಿದಾರರ ಆಕ್ಷೇಪದ ಬಗ್ಗೆಯೂ ಗಮನ ಹರಿಸಲಾಗುವುದು. ಈ ಸಂಬಂಧ ಕ್ರಿಯಾ ಯೋಜನೆ ರೂಪಿಸಿ ಕೋರ್ಟ್‌ಗೆ ಸಲ್ಲಿಸಲಾಗುವುದು’ ಎಂದರು.

ಈ ಉತ್ತರಕ್ಕೆ ತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠವು ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ.

ಏನಿದು ಅರ್ಜಿ?: ‘ಕೆ.ಆರ್.ಮಾರುಕಟ್ಟೆ ಕಟ್ಟಡದಲ್ಲಿ ತುರ್ತು ನಿರ್ಗಮನ ಸ್ಥಳ ಮತ್ತು ಪಡಸಾಲೆಯಲ್ಲಿ ಮಳಿಗೆಗಳನ್ನು ನಿರ್ಮಿಸಿ ಬೇಕಾಬಿಟ್ಟಿ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಗಾಳಿ ವ್ಯವಸ್ಥೆ ಹಾಗೂ ಅಗ್ನಿ ಸುರುಕ್ಷತೆಗೆ ತೊಂದರೆಯಾಗಿದ್ದು ಸಾರ್ವಜನಿಕರು, ಕಾರ್ಮಿಕರು ಹಾಗೂ ವ್ಯಾಪಾರಸ್ಥರ ಜೀವಗಳನ್ನು ಅಪಾಯಕ್ಕೆ ನೂಕಲಾಗುತ್ತಿದೆ’ ಎಂಬುದು ಅರ್ಜಿದಾರರ ಆರೋಪ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !