ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೆಡಿಕಲ್ ಟೆರರಿಸಂ’ ಎಂಬ ಟೈಟಲ್ ಸೃಷ್ಟಿಸಿದ್ದ ‌ಬಿಜೆಪಿ ಈಗೇಕೆ ಮೌನ?: ಕಾಂಗ್ರೆಸ್

ಬೆಡ್ ಬ್ಲಾಕಿಂಗ್ ದಂಧೆ
ಅಕ್ಷರ ಗಾತ್ರ

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ‘ಮೆಡಿಕಲ್‌ ಟೆರರಿಸಂ’ ಎಂಬ ಹೊಸ ಟೈಟಲ್‌ ಸೃಷ್ಟಿಸಿದ್ದ ಭ್ರಷ್ಟ ಬಿಜೆಪಿ ಈಗೇಕೆ ಮೌನವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತನ ಖಾತೆಗೆ ಸೋಂಕಿತರಿಂದ ಹಣ ಜಮೆಯಾಗಿದ್ದು ಪತ್ತೆಯಾಗಿದೆ. ಇದರಲ್ಲಿ ಸತೀಶ್ ರೆಡ್ಡಿಯ ಪಾತ್ರದ ಬಗ್ಗೆ ತನಿಖೆ ಇಲ್ಲವೇಕೆ? ಸರ್ಕಾರ ರಕ್ಷಣೆಗೆ ನಿಂತಿದ್ದೇಕೆ?’ ಎಂದು ಪ್ರಶ್ನಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕಿತರಿಗೆ ಹಾಸಿಕೆ ಹಂಚಿಕೆ ವಿಚಾರದಲ್ಲಿ ಅವ್ಯವಹಾರ ನಡೆಸಿದೆ ಎಂದು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಹ್ಮಣ್ಯ, ಸತೀಶ ರೆಡ್ಡಿ ಆರೋಪಿಸಿದ್ದರು.

ಹಾಸಿಗೆ ಬ್ಲಾಕಿಂಗ್ ಪ್ರಕರಣದಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿ ಆಪ್ತ ಎನ್ನಲಾದ ಬಾಬು ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಇನ್‌ಸ್ಪೆಕ್ಟರ್‌ ಶ್ರೀಧರ್ ಪೂಜಾರ ನೇತೃತ್ವದ ತಂಡ, ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 250 ಪುಟಗಳ ಆರೋಪ ಪಟ್ಟಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT