ಬೆಂಗಳೂರು: ಈ ಬಾರಿಯ ಬಿಬಿಎಂಪಿ ಬಜೆಟ್‌ನಲ್ಲಿ ₹5 ಲಕ್ಷ ಘಟಕ ವೆಚ್ಚದಲ್ಲಿ ಒಂಟಿ ಮನೆ ಯೋಜನೆಯನ್ನು ವಿಸ್ತರಿಸಿ, ಹೊಸದಾಗಿ 2 ಸಾವಿರ ಮನೆ ನಿರ್ವಿಸಲು ಉದ್ದೇಶಿಸಿದೆ. ಇದಕ್ಕಾಗಿ ಬಜೆಟ್‌ನಲ್ಲಿ ₹100 ಕೋಟಿ ಮೀಸಲಿಟ್ಟಿದೆ.

ಬೀದಿ ಬದಿ ವ್ಯಾಪಾರಿಗಳ ಕಲ್ಯಾಣಕ್ಕೆ ನಗರದಲ್ಲಿ ಸರ್ವೆ ನಡೆಸಲಾಗಿದ್ದು, ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 2 ರಂತೆ ಬೀದಿ ಬದಿ ವ್ಯಾಪಾರ ವಲಯಗಳನ್ನು ಗುರುತಿಸಲಾಗಿದೆ. ಇವುಗಳನ್ನು ಅಭಿವೃದ್ಧಿಪಡಿಸಲು ₹25 ಕೋಟಿ ಮೊತ್ತ ನಿಗದಿ ಮಾಡಿದೆ.

ನೌಕರರ ಕಾಯಂ

ನೇರ ವೇತನ ಪಡೆಯುತ್ತಿರುವ 11,710 ಕಾರ್ಮಿಕರನ್ನು ಪಾಲಿಕೆಯ ಕಾಯಂ ನೌಕರನ್ನಾಗಿ ನೇಮಿಸಿಕೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪಾಲಿಕೆಗೆ ಸೇರ್ಪಡೆಯಾಗಿರುವ 110 ಹಳ್ಳಿಗಳ ವ್ಯಾಪ್ತಿಯ ನಗರಸಭೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ 307 ನೌಕರನ್ನು ಕಾಯಂ ನೌಕರನ್ನಾಗಿ ವಿಲೀನ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.