ಬೆಂಗಳೂರು: ಬಿಬಿಎಂಪಿ ವತಿಯಿಂದ 74ನೇ ಸ್ವಾತಂತ್ರ್ಯ ದಿನವನ್ನು ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ಶನಿವಾರ ಆಚರಿಸಲಾಯಿತು.

ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸರಳವಾಗಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೇಯರ್ ಎಂ.ಗೌತಮ್ ಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಉಪಮೇಯರ್ ರಾಮಮೋಹನ ರಾಜು, ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್, ವಿಶೇಷ ಆಯುಕ್ತರುಗಳು ಸೇರಿದಂತೆ ಬೆರಳೆಣಿಕೆಯಷ್ಟು ಮಂದಿ ಭಾಗವಹಿಸಿದರು.

ಬಳಿಕ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ಅಂಗವಾಗಿ ನಗರ ರೈಲು ನಿಲ್ದಾಣದ ಬಳಿ ಇರುವ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರು ಪುಷ್ಪನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.