ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಭಾರಿ ಮಳೆ: ಸಂಚಾರ ದಟ್ಟಣೆ ಪರಿಶೀಲನೆ

Last Updated 3 ಸೆಪ್ಟೆಂಬರ್ 2022, 21:48 IST
ಅಕ್ಷರ ಗಾತ್ರ

ಬೆಂಗಳೂರು: ಮಳೆ ನೀರು ರಸ್ತೆ ಮೇಲೆ ನಿಲ್ಲುವುದನ್ನು ತಪ್ಪಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಶನಿವಾರ ಪರಿಶೀಲನೆ ನಡೆಸಿದರು.

ಹೆಬ್ಬಾಳ ಜಂಕ್ಷನ್‌ಗೆ ರಾತ್ರಿ 9 ಗಂಟೆಗೆ ಭೇಟಿ ನೀಡಿದ ಅವರು, ‘ಎಸ್ಟಿಮ್ ಹಾಲ್ ಕಡೆಯಿಂದ ಕೆ.ಆರ್.ಪುರ ಕಡೆಗೆ ಹೋಗುವ ಮಾರ್ಗದ ಅಗಲೀಕರಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೂಡಲೇ ಆರಂಭಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲೆಡೆ ಬೀದಿ ದೀಪ ಅಳವಡಿಸಬೇಕು, ಪಾದಚಾರಿ ಮಾರ್ಗ ಸರಿಪಡಿಸಬೇಕು, ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಕೆ.ಆರ್.ಪುರ, ಹೊರ ವರ್ತುಲ ರಸ್ತೆ, ಇಬ್ಬಲೂರು ಜಂಕ್ಷನ್, ಸಿಲ್ಕ್ ಬೋರ್ಡ್ ಜಂಕ್ಷನ್, ಸಾರಕ್ಕಿ ಜಂಕ್ಷನ್, ಸುಮ್ಮನಹಳ್ಳಿ ಹಾಗೂ ಗೊರಗುಂಟೆ ಪಾಳ್ಯ ಜಂಕ್ಷನ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಜಂಟಿ ಆಯುಕ್ತೆ ಪೂರ್ಣಿಮಾ, ಮುಖ್ಯ ಎಂಜಿನಿಯರ್ (ರಾಜಕಾಲುವೆ) ಲೋಕೇಶ್, ಉಮಾದೇವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT