ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚರ್ಮ ಕುಟೀರಗಳ ಸಮೀಕ್ಷೆಗೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚನೆ

Published : 27 ಸೆಪ್ಟೆಂಬರ್ 2024, 16:19 IST
Last Updated : 27 ಸೆಪ್ಟೆಂಬರ್ 2024, 16:19 IST
ಫಾಲೋ ಮಾಡಿ
Comments

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರವುಗೊಳಿಸಿರುವ ಚರ್ಮ ಕುಟೀರಗಳ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಶುಕ್ರವಾರ ಅಧಿಕಾರಿಗಳ ಸಭೆಯಲ್ಲಿ ಅವರು, ‘ವಿವಿಧ ಕಾರಣಗಳಿಂದ 192 ಚರ್ಮ ಕುಟೀರಗಳನ್ನು ತೆರವುಗೊಳಿಸಿರುವ ಮಾಹಿತಿ ಇದೆ. ಅವರಿಗೆಲ್ಲ ಕಲ್ಯಾಣ ವಿಭಾಗದಿಂದ ಪುನಃ ಸೌಲಭ್ಯ ಕಲ್ಪಿಸಲಾಗುತ್ತದೆ. ಹೀಗಾಗಿ ವಲಯವಾರು ಸಮೀಕ್ಷೆ ನಡೆಸಿ ವರದಿ ನೀಡಬೇಕು’ ಎಂದರು.

‘ಚರ್ಮ ಕುಟೀರಗಳನ್ನು ಹೊಂದಿದ್ದವರ ಮನೆಗೆ ಭೇಟಿ ನೀಡಿ, ಅವರು ಕುಟೀರ ಕಾರ್ಯದಲ್ಲಿ ಮುಂದುವರಿಯುತ್ತಾರೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ವಲಯವಾರು ಯಾವ ಸ್ಥಳದಲ್ಲಿ ಚರ್ಮ ಕುಟೀರಗಳನ್ನು ಅಳವಡಿಸಿಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಿ ಅದರ ವರದಿಯನ್ನೂ ನೀಡಬೇಕು’ ಎಂದು ತಿಳಿಸಿದರು.

ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಎಲ್ಲಾ ವಲಯ ಜಂಟಿ ಆಯುಕ್ತರು, ಕಲ್ಯಾಣ ವಿಭಾಗದ ಅಧಿಕಾರಿಗಳು, ಚರ್ಮ ಕುಟೀರ ನಡೆಸುತ್ತಿದ್ದ ಜನರ ಪ್ರತಿನಿಧಿಗಳು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT