ಶನಿವಾರ, ಜುಲೈ 31, 2021
25 °C

ಬಿಬಿಎಂಪಿ: ಆಯುಕ್ತರ ಆಪ್ತಸಹಾಯಕನಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಅವರ ಆಪ್ತ ಸಹಾಯಕ ಸಿಬ್ಬಂದಿಯೊಬ್ಬರಿಗೂ ಕೋವಿಡ್‌ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ.

ವಾರದ ಹಿಂದೆ ಅವರಿಗೂ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಹಾಗಾಗಿ ಅವರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಜ್ವರ ದಿಂದ ಚೇತರಿಸಿಕೊಂಡಿದ್ದ ಅವರು ಬುಧವಾರದಿಂದ ಕರ್ತವ್ಯಕ್ಕೆ ಹಾಜರಾಗುವುದಾಗಿ ತಿಳಿಸಿದ್ದರು. ಕಚೇರಿಗೆ ಬರುವ ಮುನ್ನ ಮುನ್ನೆಚ್ಚಚರಿಕಾ ಕ್ರಮವಾಗಿ ಕೋವಿಡ್‌ ಪರೀಕ್ಷೆಗೆ ಒಳಗಾಗುವಂತೆ ಆಯುಕ್ತರು ಸೂಚಿಸಿದ್ದರು.

ಕೋವಿಡ್‌ ಪರೀಕ್ಷೆ ನಡೆಸಿದಾಗ ಅವರಿಗೂ ಸೋಂಕು ಇರುವುದು ದೃಢಪಟ್ಟಿದೆ. ಅವರಲ್ಲಿ ಕೋವಿಡ್‌ನ ಯವುದೇ ಲಕ್ಷಣಗಳಿಲ್ಲ ಎಂದು ಆಯುಕ್ತರ ಕಚೇರಿಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು