ಭಾನುವಾರ, ನವೆಂಬರ್ 28, 2021
21 °C

ಜೇಷ್ಠತೆ ಮೀರಿ ಬಿಲ್‌ ಪಾವತಿ: ಎಸಿಬಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜೇಷ್ಠತೆ ಮೀರಿ ಕಾಮಗಾರಿಗಳ ಬಿಲ್ ಪಾವತಿ ಮಾಡಿರುವ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಎ.ಎಸ್. ನರಸಿಂಹಮೂರ್ತಿ ದೂರು ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ, ಮೇಲ್ಸೇತುವೆ, ವಿದ್ಯುತ್, ಕಸ ನಿರ್ವಹಣೆ, ಮೂಲ ಸೌಕರ್ಯ ಕಾಮಗಾರಿಗಳನ್ನು ಹಲವು ಗುತ್ತಿಗೆದಾರರು ನಿರ್ವಹಿದ್ದಾರೆ. ‘ಬಿಲ್‌ ಪಾವತಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಜೇಷ್ಠತೆ ಆಧಾರದಲ್ಲಿ ಬಿಡುಗಡೆ ಮಾಡಬೇಕಿದೆ. ಆದರೆ, ಬಿಬಿಎಂಪಿ ವಿಶೇಷ ಆಯುಕ್ತರು (ಹಣಕಾಸು) ನಿಯಮಗಳನ್ನು ಗಾಳಿಗೆ ತೂರಿದ್ದಾರೆ’ ಎಂದು ಅವರು ದೂರಿದ್ದಾರೆ.

‘ಎನ್‌ಸಿಸಿ ಲಿಮಿಟೆಡ್‌ ಸಂಸ್ಥೆಯ ₹28.61 ಕೋಟಿ ಬಿಲ್‌ ಅನ್ನು ತಡ ಮಾಡದೆ ಮತ್ತು ಉನ್ನತಾಧಿಕಾರಿಯ ಅನುಮೋದನೆ ಪಡೆಯದೆಯೇ ಪಾವತಿಸಿದ್ದಾರೆ. ಇದರಿಂದ ಇತರ ಗುತ್ತಿಗೆದಾರರಿಗೆ ಅನನುಕೂಲವಾಗಿದೆ. ಬಿಲ್‌ ಪಾವತಿಯ ಅಕ್ರಮದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು