ಬಾಕಿ ಹಣಕ್ಕಾಗಿ ಅಲೆದಾಟ: ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

ಬೆಂಗಳೂರು: ಗುತ್ತಿಗೆ ಬಾಕಿ ಹಣಕ್ಕಾಗಿ ಅಲೆದಾಡಿ ಬೇಸತ್ತ ಬಿಬಿಎಂಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೈಯಾಲಿಕಾವಲ್‌ನಲ್ಲಿ ವಾಸವಿದ್ದ ವನಿ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ.
ರಾಜಾಜಿನಗರ ಕಾಂಪ್ಲೆಕ್ಸ್ ಸೇರಿದಂತೆ ಹಲವು ಕಟ್ಟಡಗಳನ್ನು ಇವರು ನಿರ್ಮಾಣ ಮಾಡಿದ್ದರು. ಕಟ್ಟಡ ನಿರ್ಮಾಣವೊಂದರ ಗುತ್ತಿಗೆ ಬಾಕಿ ಹಣ ನೀಡುವಂತೆ ಹಲವು ಬಾರಿ ಪಾಲಿಕೆಗೆ ಮನವಿ ಮಾಡಿದ್ದರು. ಹಣ ಬಾರದಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
‘ಮಹಾಲಕ್ಷ್ಮೀ ಬಡಾವಣೆಯಲ್ಲಿರುವ ಡಾ.ರಾಜಕುಮಾರ್ ಒಳಾಂಗಣ ಕ್ರೀಡಾಂಗಣದ ಬಳಿ ನಿರ್ಮಾಣ ಹಂತದ ಕಟ್ಟಡದ ಕೋಣೆಯೊಂದರಲ್ಲಿ ನಿನ್ನೆ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಯುಡಿಆರ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.