ಬೆಂಗಳೂರು: ದೇಶದ ಕೆಲವು ರಾಜ್ಯಗಳಲ್ಲಿ ಮತ್ತು ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬಿಬಿಎಂಪಿ ಹೊಸ ನಿಯಮಾವಳಿಗಳನ್ನು ಪ್ರಕಟಿಸಿದೆ.

ಈ ಬಗ್ಗೆ ಶುಕ್ರವಾರ ಬಿಬಿಎಂಪಿ ವಿಶೇಷ ಆಯುಕ್ತರು(ಆರೋಗ್ಯ) ಡಾ. ತ್ರಿಲೋಕ್ ಚಂದ್ರ ಅವರು ಸಭೆ ನಡೆಸಿದರು.

ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್‌ಗಳ ಅಸೋಸಿಯೇಷನ್(ಫಾನಾ) ಮತ್ತು ಪ್ರಮುಖ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ವರ್ತಕರ ಸಂಘಗಳ , ಮಾಲ್‌ಗಳು, ಹೋಟೆಲ್‌ಗಳು, ಚಿತ್ರಮಂದಿರಗಳು ಮತ್ತು ಇತರೆ ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪದಾಧಿಕಾರಿಗಳು ಸಭೆಯಲ್ಲಿ
ಪಾಲ್ಗೊಂಡಿದ್ದರು.

ಆಸ್ಪತ್ರೆಗಳಿಗೆ ಸೂಚನೆಗಳು:

lಹೊರ ರೋಗಿಗಳ ವಿಭಾಗಗಳಲ್ಲಿ ವಿಷಮ ಶೀತ ಜ್ವರ (ಐಎಲ್‌ಐ) ಮತ್ತು ತೀವ್ರ ಉಸಿರಾಟದ ತೊಂದರೆ (ಎಸ್‌ಎಆರ್‌ಐ) ಪ್ರಕರಣಗಳನ್ನು ಪರೀಕ್ಷಿಸಬೇಕು ಹಾಗೂ ಒಳರೋಗಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಬೇಕು.

lಐಸಿಎಂಆರ್ ಪೋರ್ಟಲ್‌ನಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಎಲ್ಲ ಪರೀಕ್ಷಾ ವಿವರಗಳನ್ನು ಅಪ್‌ಲೋಡ್ ಮಾಡಬೇಕು. ಸೋಂಕು ದೃಢಪಟ್ಟ ಪ್ರಕರಣಗಳನ್ನು ಜೀನೋಮಿಕ್ ಸೀಕ್ವೆನ್ಸಿಂಗ್ ಕಳುಹಿಸಬೇಕು.

lಖಾಸಗಿ ಆಸ್ಪತ್ರೆಯಲ್ಲಿ ಶೇ10ರಷ್ಟು ಹಾಸಿಗೆಗಳನ್ನು ಕಡ್ಡಾಯವಾಗಿ ಮೀಸಲಿರಿಸುವ ಕೇಂದ್ರ ಸರ್ಕಾರದ ಹಿಂದಿನ ಆದೇಶವು ಇನ್ನೂ ಪ್ರಸ್ತುತವಾಗಿದೆ. ಹೀಗಾಗಿ, ಆಸ್ಪತ್ರೆಗಳು ಸನ್ನದ್ಧ ಸ್ಥಿತಿಯಲ್ಲಿ ಇರಬೇಕು.

ಚಿತ್ರಮಂದಿರಗಳು, ವಾಣಿಜ್ಯ ಸಂಸ್ಥೆಗಳಿಗೆ ನಿರ್ದೇಶನಗಳು:

lಎರಡು ಡೋಸ್ ಲಸಿಕೆ ಪಡೆಯುವುದನ್ನು ಕಟ್ಟುನಿಟ್ಟಾಗಿ ಕಡ್ಡಾಯಗೊಳಿಸಬೇಕು.

lಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು, ಸುರಕ್ಷಿತ ಅಂತರ ಪಾಲಿಸಬೇಕು. ಪ್ರವೇಶ ದ್ವಾರಗಳಲ್ಲಿ ತಾಪಮಾನ ತಪಾಸಣೆ ಮಾಡಬೇಕು.

lಎಲ್ಲ ಸಿಬ್ಬಂದಿಗಳು ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು.

lಹೆಚ್ಚು ಜನರು ಸೇರುವ ವ್ಯಾಪಾರ ಪ್ರದೇಶಗಳಲ್ಲಿ ಮಾರ್ಷಲ್‌ಗಳು ಗಸ್ತು ತಿರುಗಬೇಕು ಮತ್ತು ಜಾಗೃತಿ ಕ್ರಮಗಳನ್ನು ಕೈಗೊಳ್ಳಬೇಕು.

ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ಸೂಚನೆಗಳು:

lಮುನ್ನೆಚ್ಚರಿಕೆ ಡೋಸ್ ಕವರೇಜ್ ಮತ್ತು ಮಕ್ಕಳ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಕ್ರಮಗಳನ್ನು ಕೈಗೊಳ್ಳಬೇಕು.

lಎಲ್ಲಾ ವಯೋಮಾನದವರೂ ಶೇ 100ರಷ್ಟು ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಲು ಶಿಬಿರಗಳನ್ನು ಆಯೋಜಿಸಬೇಕು.

lದೊಡ್ಡ ಅಪಾರ್ಟ್‌ಮೆಂಟ್ ಸಂಕೀರ್ಣಗಳಿಂದ ವೈರಾಣುವಿನ ವಂಶವಾಹಿ ಸಂಚರನೆಯ ವಿಶ್ಲೇಷಣೆಗೆ ಚರಂಡಿಯ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ.

lಉಗುಳುವಿಕೆ ವಿರುದ್ಧ ಆಂದೋಲನ ಮತ್ತು ಮಾಸ್ಕ್ ಧರಿಸುವಂತೆ ಅಭಿಯಾನ ಕೈಗೊಳ್ಳಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.