ಬುಧವಾರ, ಆಗಸ್ಟ್ 5, 2020
22 °C

ಕೋವಿಡ್‌ ಪರೀಕ್ಷೆ: ಎನ್‌ಎಸ್‌ಎಸ್, ಅರೆ ವೈದ್ಯಕೀಯ ವಿದ್ಯಾರ್ಥಿಗಳ ಬಳಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್ ಪರೀಕ್ಷೆ ಮತ್ತು ಸೋಂಕು ನಿಯಂತ್ರಣಕ್ಕೆ ನಗರದ ವಿವಿಧ ಕಾಲೇಜುಗಳ 994 ಅರೆ ವೈದ್ಯಕೀಯ ಕೋರ್ಸ್‌ಗಳ ವಿದ್ಯಾರ್ಥಿಗಳನ್ನು ಹಾಗೂ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್ ಪ್ರಸಾದ್ ಅವರು ಈ ಕುರಿತು ಆದೇಶ ಮಾಡಿದ್ದಾರೆ. ಅರೆ ವೈದ್ಯಕೀಯ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ಕೆ ಪಾಲಿಕೆ ತಿಂಗಳಿಗೆ ₹20 ಸಾವಿರ ಗೌರವಧನ ನೀಡಲಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಅಧೀನದ 21 ಕಾಲೇಜುಗಳ ವಿದ್ಯಾರ್ಥಿಗಳನ್ನು ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅವರಿಗೆ ಆಯುಕ್ತರು ಸೂಚಿಸಿದ್ದಾರೆ.

ಕೋವಿಡ್ ಪರೀಕ್ಷೆ ನಡೆಸಲು ವಿವಿಧ ವಾರ್ಡ್‌ಗಳಲ್ಲಿ ಜನರ ಗಂಟಲ ದ್ರವದ ಮಾದರಿ ಸಂಗ್ರಹ ಕಾರ್ಯಕ್ಕೆ ಎನ್‌ಎಸ್‌ಎಸ್ ವಿದ್ಯಾರ್ಥಿಗಳನ್ನು ಒದಗಿಸುವಂತೆ ಆಯುಕ್ತರು ರಾಜ್ಯ ಎನ್‌ಎಸ್‌ಎಸ್ ಅಧಿಕಾರಿಗೆ ಪತ್ರ ಬರೆದಿದ್ದಾರೆ. ವಿದ್ಯಾರ್ಥಿಗಳಿಗೆ ತಿಂಗಳಿಗೆ ₹14 ಸಾವಿರ ಗೌರವಧನ ನೀಡಲಾಗುವುದು. ಅವರನ್ನು ಕರೆದೊಯ್ಯಲು ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು