ಕೋವಿಡ್ ಲಸಿಕೆ: 23 ಮಂದಿಗೆ ಆರೋಗ್ಯ ಸಮಸ್ಯೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುವಾರ ಕೋವಿಡ್ ಲಸಿಕೆ ಹಾಕಿಸಿಕೊಂಡ 23 ಮಂದಿಯಲ್ಲಿ ಸಣ್ಣ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಪಶ್ಚಿಮ ವಲಯದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಂಡ 22 ಮಂದಿಯ ಮತ್ತು ದಕ್ಷಿಣ ವಲಯದ ಲಸಿಕಾ ಕೇಂದ್ರವೊಂದರಲ್ಲಿ ಲಸಿಕೆ ಪಡೆದ ಒಬ್ಬರ ಆರೋಗ್ಯದಲ್ಲಿ ಮಾತ್ರ ತುಸು ಏರುಪೇರು ಕಂಡುಬಂದಿದೆ. ಗಂಭೀರ ಸಮಸ್ಯೆಗಳು ಯಾವುವೂ ವರದಿಯಾಗಿಲ್ಲ ಎಂದು ಬಿಬಿಎಂಪಿ ತಿಳಿಸಿದೆ.
ಸರ್ಕಾರಿ ವೈದ್ಯಕೀಯ ಸಂಸ್ಥೆಗಳ 2,328 ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ 8,141 ಆರೋಗ್ಯ ಕಾರ್ಯಕರ್ತರು ಸೇರಿ ಒಟ್ಟು 10,469 ಮಂದಿಗೆ ಗುರುವಾರ ಲಸಿಕೆ ಹಾಕಲು ಉದ್ದೇಶಿಸಲಾಗಿತ್ತು. ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 1,027 ಹಾಗೂ ಖಾಸಗಿ ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ 4,383 ಮಂದಿ ಲಸಿಕೆ ಹಾಕಿಸಿಕೊಂಡರು. ಗುರುವಾರ ಒಟ್ಟು 115 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗಿದ್ದು, ಹೆಸರು ನೋಂದಾಯಿಸಿದ್ದವರಲ್ಲಿ ಶೇ 51.68 ಮಂದಿ ಮಾತ್ರ ಲಸಿಕೆ ಪಡೆದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.