ಬುಧವಾರ, ಜೂನ್ 16, 2021
27 °C

ಹಾಸಿಗೆ ಬ್ಲಾಕಿಂಗ್ ದಂಧೆ: ಮತ್ತೊಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹಾಸಿಗೆ ಬ್ಲಾಕಿಂಗ್ ದಂಧೆಯ ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸಪ್ತಗಿರಿ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಆಂಥೋನಿ ಬಂಧಿತ ಆರೋಪಿ.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಸಿಗೆ ಹಂಚಿಕೆ ಮಾಡುವುದಾಗಿ ಹೇಳಿ ಹೆಚ್ಚು ಹಣ ಪಡೆಯುತ್ತಿದ್ದ. ವಿಚಾರಣೆ ವೇಳೆ ಅಧಿಕಾರಿಗಳಿಗೆ ಈ ಮಾಹಿತಿ ಲಭ್ಯವಾಗಿತ್ತು, ಇದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡುತ್ತಿದ್ದ ಆರೋಪದಡಿ ನಗರದ ಕೆಲ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದರು.

ಇತ್ತೀಚೆಗಷ್ಟೇ ‘ಆರೋಗ್ಯ ಮಿತ್ರ’ ಅಧಿಕಾರಿ ಶಶಿಧರ್, ರಾಜರಾಜೇಶ್ವರಿ ನಗರದ ಸ್ಪರ್ಶ ಆಸ್ಪತ್ರೆ ನೌಕರ ವೆಂಕೋಬ ರಾವ್ ಹಾಗೂ ಬಸವೇಶ್ವರನಗರದ ಪುಣ್ಯ ಆಸ್ಪತ್ರೆ ನೌಕರ ಸುಧೀರ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು.

ಇವರು ನೀಡಿದ್ದ ಮಾಹಿತಿ ಆಧರಿಸಿ, ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಬಳಿಕ ಹಲವರನ್ನು ಮಂಗಳವಾರ ವಿಚಾರಣೆ ನಡೆಸಿದ್ದರು. ಈವರೆಗೆ ಈ ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು