ಸೋಮವಾರ, ಜನವರಿ 17, 2022
18 °C

ಡೆಂಗಿ, ಚಿಕೂನ್‌ಗುನ್ಯ ತಡೆಗೆ ಮುನ್ನೆಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲ ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದ ಡೆಂಗಿ ಮತ್ತು ಚಿಕೂನ್‌ಗುನ್ಯ ಹೆಚ್ಚಾಗುವ ಸಂಭವವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆರೋಗ್ಯಾಧಿಕಾರಿಗಳಿಗೆ ವಿಶೇಷ ಆಯುಕ್ತ(ಆರೋಗ್ಯ) ಕೆ.ವಿ. ತ್ರಿಲೋಕ್ ಚಂದ್ರ ಸೂಚನೆ ನೀಡಿದರು.

ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗುವುದನ್ನು ತಡೆಯಬೇಕು. ಹೂವಿನ ಕುಂಡ, ಬೀಸಾಡಿದ ಟೈರ್‌, ನೀರಿನ ತೊಟ್ಟಿ, ಸಜ್ಜೆ, ನೀರಿನ ಬಾಟಲಿಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮ ನಿರ್ದೇಶನಾಲಯದ ಹಿರಿಯ ಪ್ರಾದೇಶಿಕ ನಿರ್ದೇಶಕ ಡಾ. ರವಿಕುಮಾರ್, ‘ನಗರದಲ್ಲಿ ಡೆಂಗಿ ಮತ್ತು ಚಿಕೂನ್‌ಗುನ್ಯ ಪ್ರಕರಣಗಳು ಹೆಚ್ಚಾಗುವ ಸಂಭವವಿದೆ’ ಎಂದು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು