ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ವ್ಯಾಪ್ತಿಯ ಕ್ರಮ ಕಟ್ಟಡಗಳಿಗೆ ದುಪ್ಪಟ್ಟು ದಂಡ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ನೋಟಾ’ ಅವಕಾಶ
Last Updated 20 ಮಾರ್ಚ್ 2020, 23:09 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೈಲಾ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿಗೆ ಸ್ವತ್ತು ತೆರಿಗೆ ಮತ್ತು ಅದಕ್ಕೆ ಸಮನಾದ ದಂಡ ವಿಧಿಸುವ ಮಸೂದೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅವಕಾಶ ನೀಡುವ ಮಸೂದೆ ಸೇರಿ ಒಟ್ಟು ಮೂರು ಮಸೂದೆಗಳಿಗೆ ವಿಧಾನಸಭೆ ಅಂಗೀಕಾರ ನೀಡಿದೆ.

ರಾಜ್ಯದ ಇತರ ನಗರಗಳಲ್ಲಿ ಬೈಲಾ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದರೆ ಅದಕ್ಕೆ ದಂಡ ವಿಧಿಸುವ ಅವಕಾಶವಿದೆ. ಆದರೆ, ಬೆಂಗಳೂರಿನಲ್ಲಿ ಇದಕ್ಕೆ ಅವಕಾಶ ಇರಲಿಲ್ಲ. ಇಂತಹ ಕಟ್ಟಡಗಳ ಬಗ್ಗೆ ಬಿಬಿಎಂಪಿ ಮುಂದಿನ ಕ್ರಮ ತೆಗೆದುಕೊಳ್ಳುವವರೆಗೆ ದುಪ್ಪಟ್ಟು ದಂಡ ಪಾವತಿಸುವುದಕ್ಕೆ ‘ಕರ್ನಾಟಕ ನಗರ ಪಾಲಿಕೆಗಳ(ತಿದ್ದುಪಡಿ) ಮಸೂದೆ’ ಅವಕಾಶ ನೀಡಲಿದೆ ಎಂದು ಮುಖ್ಯಮಂತ್ರಿಯವರ ಪರವಾಗಿ ಮಸೂದೆ ಮಂಡಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಉದ್ದೇಶ ಮಸೂದೆಗಿಲ್ಲ. ಆದರೆ, ನಿಯಮ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿಂದ ದಂಡ ವಸೂಲಿ ಮಾಡಿದರೆ ಸರ್ಕಾರದ ಆದಾಯವೂ ಹೆಚ್ಚುತ್ತದೆ ಎಂದರು.

ಅಲ್ಲದೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಆಪ್ಟಿಕಲ್‌ ಫೈಬರ್‌ ಕೇಬಲ್‌ ಹಾಕುವಾಗ ಶುಲ್ಕ ಪಾವತಿಸುವುದರ ಜತೆಗೆ ವಾರ್ಷಿಕ ಟ್ರಾಕ್‌ ಬಾಡಿಗೆಯನ್ನೂ ಪಾವತಿಸಲು ನಿಯಮಾವಳಿಯಲ್ಲಿ ತಿದ್ದುಪಡಿ ತರಲಾಗಿದೆ ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನೋಟಾ:

* ಪುರಸಭೆ ಮತ್ತು ನಗರಪಾಲಿಕೆಯಂತಹ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘ನೋಟಾ’ ಜಾರಿ ಮಾಡಲು ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು ಮಸೂದೆಗೆ ತಿದ್ದುಪಡಿ ತರಲಾಗಿದೆ. ಇವಿಎಂಗಳಲ್ಲಿ ಈವರೆಗೂ ನೋಟಾಗೆ ಅವಕಾಶ ಇರಲಿಲ್ಲ.

* ಕರ್ನಾಟಕ ಬಹಿರಂಗ ಸ್ಥಳಗಳ(ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) ತಿದ್ದುಪಡಿ ಮಸೂದೆ ಒಪ್ಪಿಗೆ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT