ಭಾನುವಾರ, ಏಪ್ರಿಲ್ 5, 2020
19 °C

 ಸೋಂಕು ನಿವಾರಕ ಸಿಂಪಡಣೆಗೆ ಬಿಬಿಎಂಪಿ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ವೈರಸ್  ಎಲ್ಲಡೆ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದ ಪ್ರಮುಖ ಸ್ಥಳಗಳಲ್ಲಿ ಸೋಂಕು ನಿವಾರಕ (ಸೋಡಿಯಂ ಹೆೃಪೊ ಕ್ಲೋರೈಡಂ) ಸಿಂಪಡಣೆ ಮಾಡಲಿದೆ.

ಈ ಕಾರ್ಯಕ್ಕೆ ಮೇಯರ್ ಎಂ.ಗೌತಮ್ ಕುಮಾರ್ ಪಾಲಿಕೆ ಕೇಂದ್ರ ಕಚೇರಿ ಬಳಿ ಮಂಗಳವಾರ  ಚಾಲನೆ ನೀಡಿದರು.

ಕರೋನಾ ಸೋಂಕಿತರ ಮನೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೆಟ್ಟಿಂಗ್ ಮೆಷೀನ್ ಯಂತ್ರಗಳ ಮೂಲಕ ಹಾಗೂ  ಡ್ರೋನ್ ಯಂತ್ರಗಳ ಸಹಾಯದಿಂದ ಈ ದ್ರಾವಣವನ್ನು ಸಿಂಪಡಿಸಲಾಗುತ್ತದೆ.  

ಆಯುಕ್ತರಾದ ಅನಿಲ್ ಕುಮಾರ್, ವಿಶೇಷ ಆಯುಕ್ತ (ಕಸ ವಿಲೇವಾರಿ)  ರಂದೀಪ್, ಮತ್ತು ಜಂಟಿ ಆಯುಕ್ತ (ಕಸ ವಿಲೇವಾರಿ) ಸರ್ಫರಾಜ಼್ ಖಾನ್ ಕಾರ್ಯಾಚರಣೆ ವೀಕ್ಷಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು