ಭಾನುವಾರ, ಅಕ್ಟೋಬರ್ 24, 2021
21 °C

ದುರ್ಗಾ ಪೂಜೆ: ಷರತ್ತು ಸಡಿಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ 4 ಅಡಿ ಎತ್ತರದ ದುರ್ಗಾ ಮೂರ್ತಿಯನ್ನಷ್ಟೇ ಪ್ರತಿಷ್ಠಾಪಿಸಬೇಕು ಎಂಬ ನಿರ್ಬಂಧವನ್ನು ಬಿಬಿಎಂಪಿ ತೆಗೆದಿದೆ.

ಪುಷ್ಪಾಂಜಲಿ ಮತ್ತು ಸಂಧಿ ಪೂಜೆ ವೇಳೆ ಕೋವಿಡ್ ನಿಯಮಗಳನ್ನು ಅನುಸರಿಸಿಕೊಂಡು 50 ಜನರಿಗೆ ಹಂತ-ಹಂತವಾಗಿ ಬರಲು ಅವಕಾಶ ಕಲ್ಪಿಸಿದ್ದು, ಹೀಗೆ ಬರುವ ಒಟ್ಟು ಸಂಖ್ಯೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ.

ಅವಶ್ಯಕತೆ ಅನುಸಾರ, ಒಂದು ವಾರ್ಡಿಗೆ ಅನೇಕ ಮೂರ್ತಿಗಳನ್ನು ಇಡಲು ಅವಕಾಶ ಕಲ್ಪಿಸಿದ್ದು, ವಲಯ ಜಂಟಿ ಆಯುಕ್ತರು ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ.

ಪ್ರಾರ್ಥನಾ ಸಮಯದಲ್ಲಿ ಸಾಂಪ್ರದಾಯಿಕ ವಾದ್ಯಗಳಿಗೆ(ಡಾಕ್ ಮತ್ತು ಡೋಲ್) ಅನುಮತಿಸಲಾಗಿದೆ. ಇನ್ನುಳಿದ ವಿಷಯಗಳ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶದಂತೆ ಷರತ್ತುಗಳನ್ನು ಪಾಲಿಸಬೇಕು ಎಂದು ತಿಳಿಸಿದೆ. ದುರ್ಗಾ ಪೂಜೆಗೆ ವಿಧಿಸಿದ್ದ ಷರತ್ತುಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಸಂಸದ ತೇಜಸ್ವಿ ಸೂರ್ಯ ಅವರು ಬಿಬಿಎಂಪಿಗೆ ಬುಧವಾರ ಪತ್ರ ಬರೆದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು