ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಲಿ ಮೇಲೆ ಮನೆ ಬಾಗಿಲಿಗೆ ಶಾಲೆ

Last Updated 28 ಮೇ 2022, 20:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯ ಕೊಳೆಗೇರಿ ಮಕ್ಕಳ ವಿದ್ಯಾಭ್ಯಾಸಕ್ಕೆ ರೂಪಿಸಿರುವ ‘ಮನೆ ಬಾಗಿಲಿಗೆ ಶಾಲೆ’ ವಾಹನಕ್ಕೆ ಬಿಬಿಎಂಪಿ ಗುರುವಾರ ಚಾಲನೆ ನೀಡಿತು.

ಫ್ರೀಥಿಂಕಿಂಗ್ ಫೌಂಡೇಷನ್ ಸಹಭಾಗಿತ್ವದಲ್ಲಿ ಅನುಷ್ಠಾನಕ್ಕೆ ತಂದಿರುವ ಈ ಶಾಲೆಗೆ ಬಿಬಿಎಂಪಿ ಸಹಾಯಕ ಆಯುಕ್ತ(ಶಿಕ್ಷಣ) ಉಮೇಶ್ ಅವರು ಚಾಲನೆ ನೀಡಿದರು.

‘ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಮಕ್ಕಳ ಆರಂಭಿಕ ಕಲಿಕೆಗೆ ಇದು ಅನುಕೂಲ ಆಗಲಿದೆ. ಬೇರೆಲ್ಲಾ ವಲಯಗಳಲ್ಲೂ ಈಗಾಗಲೇ ಈ ಕಾರ್ಯಕ್ರಮ ಜಾರಿಯಲ್ಲಿದೆ’ ಎಂದು ಅವರು ಹೇಳಿದರು.

‘ಪ್ರತಿ ಬಸ್‌ನಲ್ಲಿ 50 ವಿದ್ಯಾರ್ಥಿಗಳು ಕುಳಿತು ಪಾಠ– ಪ್ರವಚನ ಕಲಿಯಲು ಆಸನದ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಎಲ್ಲ ಕಲಿಕಾ ಸಾಮಗ್ರಿಗಳನ್ನು ಬಸ್ಸಿನಲ್ಲಿ ಇರಿಸಲಾಗಿದೆ. ಈ ಶಾಲೆಯಲ್ಲಿ ಇಬ್ಬರು ಶಿಕ್ಷಕಿಯರು, ಒಬ್ಬರು ಡಿ ಗ್ರೂಪ್ ನೌಕರರು ಇರಲಿದ್ದಾರೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT