ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಎ’, ‘ಬಿ’ ಖಾತೆ: ಅಧ್ಯಯನಕ್ಕೆ ಮಾಜಿ ಮೇಯರ್‌ಗಳ ಸಮಿತಿ– ಡಿಕೆಶಿ

Published 22 ಜೂನ್ 2024, 16:28 IST
Last Updated 22 ಜೂನ್ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ‘ಎ’ ಖಾತೆ, ‘ಬಿ’ ಖಾತೆ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಮತ್ತು ಆಡಳಿತಕ್ಕೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಮಾಜಿ ಮೇಯರ್‌ಗಳ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಮತ್ತು ಉಪಮೇಯರ್‌ಗಳ ಜತೆ ಶನಿವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘10 ದಿನಗಳಲ್ಲಿ ಮತ್ತೊಮ್ಮೆ ಸಭೆ ಸೇರುತ್ತೇವೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಮತ್ತು ಶಾಸಕರ ಜತೆ ಚರ್ಚೆ ಮಾಡುತ್ತೇವೆ. ನಂತರ‌ ಕಾರ್ಯಯೋಜನೆ ರೂಪಿಸುತ್ತೇವೆ’ ಎಂದರು.

‘ಮಾಜಿ ಮೇಯರ್ ಹಾಗೂ ಉಪಮೇಯರ್‌ಗಳ ಜತೆ ಬೆಂಗಳೂರಿನ ಆಚಾರ–ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ, ಬಿಬಿಎಂಪಿ ಚುನಾವಣೆ ತಯಾರಿ ಬಗ್ಗೆ‌ ಸಲಹೆ, ಅಭಿಪ್ರಾಯ ಕೇಳಿದ್ದೇವೆ’ ಎಂದರು.

ಬಿಬಿಎಂಪಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಖಂಡಿತವಾಗಿ ಚುನಾವಣೆ ಮಾಡಲೇಬೇಕು. ಅದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ’ ಎಂದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಮೇಯರ್‌ಗಳಾದ ಪಿ.ಆರ್. ರಮೇಶ್, ಪದ್ಮಾವತಿ, ಸಂಪತ್ ರಾಜ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT