ಬುಧವಾರ, ನವೆಂಬರ್ 13, 2019
19 °C

ಪಾಲಿಕೆ ಚುನಾವಣೆ; ಟಿಕೆಟ್ ಆಕಾಂಕ್ಷಿಗಳಿಗೆ ಎಎಪಿ ಸಂವಾದ

Published:
Updated:

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಟಿಕೆಟ್‌ ಆಕಾಂಕ್ಷಿಗಳಿಗೆ ಆಮ್‌ ಆದ್ಮಿ ಪಕ್ಷವು (ಎಎಪಿ) ಭಾನುವಾರ (ಅ.20) ಸಂವಾದ ಏರ್ಪಡಿಸಿದೆ. 

‘ವಿಜಯನಗರದ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂವಾದ ನಡೆಯಲಿದೆ. ನಗರದಲ್ಲಿ ಜನರು ಪ್ರತಿದಿನ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳು, ಸಮಸ್ಯೆಗಳ ನಿವಾರಣೆಗೆ ಪಕ್ಷದಿಂದ ರೂಪಿಸಿರುವ ಪರಿಹಾರ ಕ್ರಮಗಳು, ಅಭ್ಯರ್ಥಿಗಳು ಚುನಾವಣೆಯನ್ನು ಎದುರಿಸಲು ಅನುಸರಿಸಬೇಕಾದ ವಿಧಾನಗಳು ಮೊದಲಾದವುಗಳ ಬಗ್ಗೆ ಪಕ್ಷದ ಮುಖಂಡರು ಆಕಾಂಕ್ಷಿಗಳಿಗೆ ತಿಳಿಸಿಕೊಡಲಿದ್ದಾರೆ. ಇದೇ ವೇಳೆ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಲಾಗುವುದು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ಸಂಚಾಲಕಿ ಶಾಂತಲಾ ದಾಮ್ಲೆ ತಿಳಿಸಿದರು.

‘ಬಿಬಿಎಂಪಿಯ 198 ವಾರ್ಡ್‌ಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದರು.

ಪ್ರತಿಕ್ರಿಯಿಸಿ (+)