ಸೋಮವಾರ, ಆಗಸ್ಟ್ 15, 2022
27 °C
ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ: ಸಚಿವ ಸೋಮಶೇಖರ್

ಅಕ್ಟೋಬರ್ ಒಳಗೆ ಬಿಬಿಎಂಪಿ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಅಕ್ಟೋಬರ್‌ ಒಳಗೆ ನಡೆಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಅಂದ್ರಹಳ್ಳಿಯಲ್ಲಿ ಬೆಸ್ಕಾಂ ಹಾಗೂ ವಿದ್ಯುತ್ ವಾಣಿ ಪರಿಸರ ಸಂಘಟನೆ ಆಶ್ರಯದಲ್ಲಿ ಶನಿವಾರ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸುಪ್ರೀಂ ಕೋರ್ಟ್ ಆದೇಶದಂತೆ ಅಕ್ಟೋಬರ್‌ ಒಳಗಾಗಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ವಾರ್ಡ್‌ಗಳ ಸಂಖ್ಯೆ ಹೆಚ್ಚಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ತಕರಾರು ಸಲ್ಲಿಸಲು ಸಾರ್ವಜನಿಕರಿಗೆ ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದೆ. ಆ ನಂತರ
ಮತ್ತೊಮ್ಮೆ ಕರಡು ಪರಿಶೀಲಿಸಿ ವಾರ್ಡ್‌ಗಳಿಗೆ ಮೀಸಲಾತಿ ಪ್ರಕಟಿಸಲಾಗುತ್ತದೆ’ ಎಂದರು.

‘ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

‘ಹೊರವಲಯ ದೊಡ್ಡ ಬಿದರಕಲ್ಲು ವಾರ್ಡ್‌ನಲ್ಲಿ ಮೂಲಸೌಕರ್ಯ ಕಲ್ಪಿಸಲು ಸಿದ್ಧತೆಗಳು ನಡೆದಿದೆ. ಇಡೀ ವಾರ್ಡ್‌ಗೆ ಕಾವೇರಿ ನೀರು ಸರಬರಾಜು ಮಾಡಲಾಗುತ್ತದೆ. ನಂತರ, ಡಾಂಬರೀಕರಣ ನಡೆಯ
ಲಿದೆ. ಜಲಮಂಡಳಿ ಕಾಮಗಾರಿ ಮುಗಿದಿರುವ ರಸ್ತೆಗಳಲ್ಲಿ ಡಾಂಬರೀಕರಣ ಆರಂಭವಾಗಿದೆ. ಎರಡು ತಿಂಗಳಲ್ಲಿ ನೀರು ಸರಬರಾಜು ಮತ್ತು ಡಾಂಬರೀಕರಣ ನಡೆಯಲಿದೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು