ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ಮಾಡಲಾಗುವುದು:ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Published 11 ಜೂನ್ 2024, 16:14 IST
Last Updated 11 ಜೂನ್ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿ ಚುನಾವಣೆ ಮಾಡುವ ಸಂಬಂಧ ವಾರ್ಡ್ ಮೀಸಲಾತಿ ಸೇರಿದಂತೆ ಇತರೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಈಗಾಗಲೇ ತಯಾರಿ ಮಾಡಿದ್ದೇವೆ. ಆದಷ್ಟು ಬೇಗ ಚುನಾವಣೆ ಮಾಡುತ್ತೇವೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಬಿಎಂಪಿ ವಿಭಜನೆ ಪ್ರಸ್ತಾವ ಈ ಹಿಂದೆಯೇ ಇತ್ತು. ಆ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಏನೇ ಇದ್ದರೂ, ಆದಷ್ಟು ಬೇಗ ಚುನಾವಣೆ ಮಾಡಲಾಗುವುದು. ಚುನಾವಣೆ ಮಾಡದಿದ್ದರೆ ಕೋರ್ಟ್ ಬಿಡುವುದಿಲ್ಲ’ ಎಂದರು.

ಈಗಲೇ ಟೀಕೆ ಸರಿಯಲ್ಲ: ಬಿಜೆಪಿ ಸಂಸದ ವಿ. ಸೋಮಣ್ಣ ಅವರಿಗೆ ಜಲಶಕ್ತಿ ರಾಜ್ಯ ಖಾತೆ ಸಚಿವ ಸ್ಥಾನ ನೀಡಿರುವುದಕ್ಕೆ ತಮಿಳುನಾಡು ಆಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್, ‘ಸೋಮಣ್ಣ ಸಚಿವರಾಗಿರುವುದು ಇಡೀ ದೇಶಕ್ಕೆ. ಅವರು ಒಂದು ರಾಜ್ಯಕ್ಕೆ ಸೀಮಿತವಲ್ಲ. ರಾಜ್ಯದ ಬಗ್ಗೆ ಹೆಚ್ಚಿನ ಆದ್ಯತೆ ಕೊಡುವುದು ಸಹಜ’ ಎಂದರು.

‘ಸಚಿವರಾಗಿ ಸೋಮಣ್ಣ ಇನ್ನೂ ಕಣ್ಣೇ ಬಿಟ್ಟಿಲ್ಲ. ಈಗಲೇ ಏಕೆ ಟೀಕೆ ಮಾಡುವುದು? ಅವರು ರಾಜ್ಯದ ಹಿತ ಕಾಪಾಡಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT