ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಆಯುಕ್ತರ ತರಾಟೆ-ಬೆದರಿದ ಎಂಜಿನಿಯರ್ ಹೃದಯಾಘಾತದಿಂದ ಸಾವು

Last Updated 31 ಅಕ್ಟೋಬರ್ 2019, 16:04 IST
ಅಕ್ಷರ ಗಾತ್ರ

ಬೆಂಗಳೂರು: ಶಾಂತಿನಗರ ಉಪವಿಭಾಗದ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಅವರು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಸ್ತೆಗಳಲ್ಲಿ ಗುಂಡಿ ಇರುವ ಬಗ್ಗೆ ಸ್ಥಳೀಯರು ಪಾಲಿಕೆ ಸಹಾಯ ಆ್ಯಪ್ ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದರು.

ಗುಂಡಿ ಮುಚ್ಚುವ ಕಾರ್ಯ ಸಮರ್ಪಕವಾಗಿ ನಡೆಯದ ಬಗ್ಗೆಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ಬೆಳವಣಿಗೆಯಿಂದ ನಾಗರಾಜ್ ವಿಚಲಿತರಾಗಿದ್ದರು ಎಂದು ಪಾಲಿಕೆ ಮೂಲಗಳು ತಿಳಿಸಿವೆ.

50 ವರ್ಷ ವಯಸ್ಸಿನ ನಾಗರಾಜ್ಅವರಿಗೆ ಸಂಜೆ 5.30ರ ವೇಳೆಗೆ ಎದೆನೋವು ಕಾಣಿಸಿಕೊಂಡಿತು. ತಕ್ಷಣವೇ ಹಾಸ್ಮಾಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT