ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘನತ್ಯಾಜ್ಯ ವಿಲೇವಾರಿ ವಿವರ ಸಲ್ಲಿಸಲು ನಿರ್ದೇಶನ

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ
Last Updated 12 ನವೆಂಬರ್ 2020, 21:54 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆ ಕಾರ್ಯಾದೇಶ ವಿತರಣೆಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಯುತ್ತಿರುವಾಗ ಘನ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಣೆಗೆ ಗುತ್ತಿಗೆದಾರರಿಗೆ ನೀಡಿರುವ ಕಾರ್ಯಾದೇಶಗಳ ವಿವರವಾದ ಪಟ್ಟಿ ಸಲ್ಲಿಸುವಂತೆ ಹೈಕೋರ್ಟ್‌ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಬಿಬಿಎಂಪಿ ಪೌರ ಕಾರ್ಮಿಕರ ಮತ್ತು ಆರೋಗ್ಯ ಗ್ಯಾಂಗ್‌ಮನ್‌ಗಳ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠದಲ್ಲಿ ಗುರುವಾರ ನಡೆಯಿತು. ವಿಚಾರಣೆ ಬಾಕಿ ಇರುವಾಗಲೇ ಹಲವು ಕಾರ್ಯಾದೇಶಗಳನ್ನು ವಿತರಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT