ಬೆಂಗಳೂರು: ನಕಲಿ ಸಂಸ್ಥೆಗೆ ಸಾಮಗ್ರಿ ವಿತರಣೆ ಹಾಗೂ ವೈದ್ಯರನ್ನು ಒದಗಿಸಲು ಕಾರ್ಯಾದೇಶ ನೀಡಿ ಕರ್ತವ್ಯಲೋಪ ಎಸಗಿರುವ ಡಾ. ಎಸ್.ಕೆ. ಸವಿತಾ ಅವರನ್ನು ಕಾನೂನುಬಾಹಿರವಾಗಿ ಆರೋಗ್ಯಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಪೌರಕಾರ್ಮಿಕ ಅವಲಂಬಿತರ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಮಗನ ಒಡೆತನದ ನಕಲಿ ಸಂಸ್ಥೆಗೆ ಕಾರ್ಯಾದೇಶ ನೀಡಿ ಅಕ್ರಮ ಎಸಗಿದ್ದ ಬಿಬಿಎಂಪಿ ಪೂರ್ವ ವಲಯದ ಆರೋಗ್ಯಾಧಿಕಾರಿಯಾಗಿದ್ದ ಡಾ. ಸವಿತಾ ಅವರನ್ನು ಕರ್ತವ್ಯಲೋಪದ ಮೇರೆಗೆ 2024ರ ಮಾರ್ಚ್ನಲ್ಲಿ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು.

‘ಡಾ.ಸವಿತಾ ಅವರು ಬೊಮ್ಮನಹಳ್ಳಿ ಹಾಗೂ ರಾಜರಾಜೇಶ್ವರಿ ನಗರ ವಲಯದಲ್ಲಿ ಆರೋಗ್ಯಾಧಿಕಾರಿಯಾಗಿದ್ದಾಗ ಕಾನೂನುಬಾಹಿರವಾಗಿ ತಮ್ಮ ಮಗ ಸಿ. ಸಿದ್ದರಾಜು ಚಿರಾಗ್ ಒಡೆತನದ ಎವಿಎಸ್ ಎಂಟರ್ಪ್ರೈಸಸ್ ಎಂಬ ನಕಲಿ ಸಂಸ್ಥೆಗೆ ಕಾರ್ಯಾದೇಶ ನೀಡಿ ಅಕ್ರಮ ಎಸಗಿದ್ದರು. ಕಾರ್ಯಾದೇಶ ನೀಡಿರುವ ಕಡತಗಳಲ್ಲಿ ಹಲವು ನ್ಯೂನತೆಗಳಿರುವ ಬಗ್ಗೆ ಟಿವಿಸಿಸಿ ವಿಭಾಗ ವರದಿ ನೀಡಿದ್ದು, ಇದರನ್ವಯ ಸರ್ಕಾರಿ ನೌಕರರ (ನಡತೆ) ನಿಯಮಾವಳಿ ನಿಮಯ–3 ಉಲ್ಲಂಘಿಸಿ ಗಂಭೀರ ಕರ್ತವ್ಯಲೋಪ ಎಸಗಿದ್ದಾರೆ’ ಎಂದು ಆದೇಶದಲ್ಲಿ ಹೇಳಲಾಗಿತ್ತು.

‘ಅವರ ವಿರುದ್ಧ ನಾಗರಿಕ ಸೇವಾ ನಿಯಮಗಳಂತೆ ಇಲಾಖೆ ತನಿಖೆ ನಡೆಸಿ ಕರಡು ಆರೋಪಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಆದ್ದರಿಂದ ಡಾ. ಸವಿತಾ ಅವರನ್ನು ಪೂರ್ವ ವಲಯದಿಂದ ಬಿಡುಗಡೆ ಮಾಡಿ, ಕೇಂದ್ರ ಕಚೇರಿಯಲ್ಲಿರುವ ಆರೋಗ್ಯ ವಿಭಾಗದ ವಿಶೇಷ ಆಯುಕ್ತರ ಕಚೇರಿಗೆ ನೇಮಿಸಲಾಗಿದೆ ಎಂದು ಬಿಬಿಎಂಪಿ ಆಡಳಿತದ ಉಪ ಆಯುಕ್ತರು ಮುಖ್ಯ ಆಯುಕ್ತರ ಸೂಚನೆಯಂತೆ ಆದೇಶಿಸಿದ್ದರು. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ವಿಚಾರಣೆ ನಡೆಯುತ್ತಿದ್ದರೂ, ಸವಿತಾ ಅವರನ್ನು ಬೆಂಗಳೂರು ಪೂರ್ವ ನಗರ ಪಾಲಿಕೆಯ ಆರೋಗ್ಯಾಧಿಕಾರಿಯಾಗಿ ನೇಮಿಸಿರುವುದು ಸರಿಯಲ್ಲ. ಕೂಡಲೇ ಅವರನ್ನು ಅಮಾನತು ಮಾಡಬೇಕು’ ಎಂದು ಒಕ್ಕೂಟದ ಅಧ್ಯಕ್ಷ ಕೆ. ಮೋಹನ್ ಅವರು ಹೇಳಿದರು.

‘ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಡಾ. ಸವಿತಾ ಅವರ ಕರ್ತವ್ಯಲೋಪದ ಬಗ್ಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಮಯದಲ್ಲಿ ಅವರಿಗೆ ‘ನಾನ್ ಎಕ್ಸಿಕ್ಯೂಟಿವ್’ ಹುದ್ದೆಗೆ ಮಾತ್ರ ನೇಮಿಸಬೇಕು ಎಂದು ಆದೇಶಿಸಲಾಗಿದೆ. ಹೀಗಿದ್ದರೂ ಅವರನ್ನು ‘ಎಕ್ಸಿಕ್ಯೂಟಿವ್’ ಹುದ್ದೆಗೆ ನೇಮಿಸಲಾಗಿದೆ. ಅಲ್ಲದೆ, ಲೋಕಾಯುಕ್ತದಲ್ಲೂ ವಿಚಾರಣೆ ನಡೆಯುತ್ತಿದೆ. ಹೀಗಾಗಿ, ಆರೋಗ್ಯಾಧಿಕಾರಿ ಡಾ. ಸವಿತಾ ಅವರನ್ನು ಅಮಾನತು ಮಾಡಬೇಕು ಎಂದು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.