ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಒತ್ತುವರಿ: ‘ನೀರಿ’ ಪ್ರಸ್ತಾವ ಅನುಮೋದನೆಗೆ ನಿರ್ದೇಶನ

Last Updated 5 ಆಗಸ್ಟ್ 2019, 19:37 IST
ಅಕ್ಷರ ಗಾತ್ರ

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಕೆರೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ಸಲ್ಲಿಸಿರುವ ₹ 3.45 ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ, ನೀರಿ ನೇಮಕಕ್ಕೆ ಹಾಗೂ ರಾಜಕಾಲುವೆ ಒತ್ತುವರಿ ತೆರವಿಗೆ ಕೈಗೊಂಡಿರುವ ಕ್ರಮಗಳನ್ನು ನ್ಯಾಯಪೀಠಕ್ಕೆ ವಿವರಿಸಿದರು.

201 ಒತ್ತುವರಿ ತೆರವು: 2019ರ ಸಾಲಿನ ಜೂನ್-ಜುಲೈ ತಿಂಗಳಲ್ಲಿ ಒಟ್ಟು 201 ರಾಜಕಾಲುವೆ ಒತ್ತುವರಿ ತೆರವುಗೊಳಿಸಲಾಗಿದೆ. ಗುರುತಿಸಲಾಗಿದ್ದ 296 ಕಡೆ ಒತ್ತುವರಿ ಆಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ರಾಜಕಾಲುವೆಗೆ ತ್ಯಾಜ್ಯ ಬಿಸಾಡುವುದರ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಕಸ ಹಾಗೂ ತ್ಯಾಜ್ಯ ವಸ್ತುಗಳನ್ನು ರಾಜಕಾಲುವೆಗೆ ಸುರಿಯುವುದನ್ನು ತಡೆಯಲು ತಡೆಗೋಡೆ ನಿರ್ಮಿಸಲಾಗುತ್ತಿದೆ. ಇನ್ನೂ 1891 ಒತ್ತುವರಿ ತೆರವುಗೊಳಿಸಬೇಕಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT