ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ಎರವಲು ಸೇವೆ ರದ್ದತಿಗೆ ಮೊರೆ

ಎರಡು ತಿಂಗಳಲ್ಲಿ ಮನವಿ ಪರಿಗಣಿಸಲು ಆದೇಶ
Last Updated 20 ಮಾರ್ಚ್ 2020, 5:27 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿಯಲ್ಲಿ ನಿಯೋಜನೆ ಮೇಲೆ ಎರವಲು ಸೇವೆಯಲ್ಲಿ ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಎಂಜಿನಿಯರುಗಳಿಗೆ ಅವರ ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳಲ್ಲಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ’ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಅಶೋಕ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಎರವಲು ಸೇವೆ ಮೇಲೆ ನಿಯೋಜನೆಗೊಂಡ ಬಹಳಷ್ಟು ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಏಳುವರ್ಷಗಳಿಂದ ಅದೇ ಜಾಗದಲ್ಲಿ ಉಳಿದಿದ್ದು, ಇವರನ್ನು ಮಾತೃ ಇಲಾಖೆಗೆ ವಾಪಸ್ ಕಳಿಸುವಂತೆ 2019ರ ಮೇ 20ರಂದು ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಕ್ರಮ ಕೈಗೊಳ್ಳಿ’ ಎಂದು ಪಾಲಿಕೆ ಆಯುಕ್ತರಿಗೆ ನಿರ್ದೇಶಿಸಿರುವ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT