ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿಟ್ಟ ಮಹಿಳಾ ಪ್ರಶಸ್ತಿ’ ಪ್ರದಾನ

Last Updated 7 ಮಾರ್ಚ್ 2020, 22:16 IST
ಅಕ್ಷರ ಗಾತ್ರ

ಬೆಂಗಳೂರು: ‘ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕಾನೂನುಗಳ ಬಳಕೆಗಿಂತ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳಬಾರದು’ ಎಂದು ಸಿಸಿಬಿ ಇಸ್‌ಸ್ಪೆಕ್ಟರ್‌ ಅಂಜುಮಾಲಾ ನಾಯಕ್ ತಿಳಿಸಿದರು.

ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವ ಮಹಿಳಾ ದಿನದ ಅಂಗವಾಗಿ ಸಾಧಕಿಯರಿಗೆ ‘ದಿಟ್ಟ ಮಹಿಳಾ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಿಯ ನಟಿ ಭಾರತಿ ವಿಷ್ಣುವರ್ಧನ್,‘ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗುವಾಗ ಧರಿಸಿರುವ ಉಡುಪುಗಳ ಬಗ್ಗೆಪೋಷಕರು ನಿಗಾ ವಹಿಸಬೇಕು. ಅಪಾಯಕ್ಕೂ ಮುನ್ನ ಪೋಷಕರೇ ಎಚ್ಚರ ವಹಿಸಬೇಕು. ಎಲ್ಲೆಡೆ ಮೊಬೈಲ್ ಬಳಸುವುದರ ಬದಲಿಗೆ ಒಂದೆಡೆ ಕೂತು ಬಳಕೆ ಮಾಡುವಂತೆ ಸಲಹೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.

ಪಾಲಿಕೆ ಗಾಜಿನ ಮನೆ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT