ಬೆಂಗಳೂರು: ನಾಯಂಡಹಳ್ಳಿ ಬಳಿ ಬಿಬಿಎಂಪಿ ಕಸ ಸಾಗಣೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಲಾರಿ ಚಕ್ರ ಮೈ ಮೇಲೆ ಹರಿದು ಪದ್ಮಿನಿ (40) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ರಾಜರಾಜೇಶ್ವರಿನಗರ ನಿವಾಸಿ ಪದ್ಮಿನಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಉದ್ಯೋಗಿ ಎಂಬುದಾಗಿ ಗೊತ್ತಾಗಿದೆ. ಪದ್ಮಿನಿ ಅವರು ಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಬ್ಯಾಟರಾಯನಪುರ ಸಂಚಾರ ಪೊಲೀಸರು ಹೇಳಿದರು.

‘ಬಿಬಿಎಂಪಿ ಕಸ ಸಾಗಣೆ ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಗೊತ್ತಾಗಿದೆ. ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ’ ಎಂದೂ ತಿಳಿಸಿದರು.

ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ: ‘ಪದ್ಮಿನಿ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದಿದ್ದ ಪದ್ಮಿನಿ ಅವರ ಮೈ ಮೇಲೆಯೇ ಲಾರಿ ಚಕ್ರ ಹರಿದಿತ್ತು. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸರು ವಿವರಿಸಿದರು.

‘ತೀವ್ರ ಗಾಯಗೊಂಡು ಪದ್ಮಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಕ್ತಸಿಕ್ತ ಸ್ಥಿತಿಯಲ್ಲಿದ್ದ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದೂ ಹೇಳಿದರು.

‘ಲಾರಿ ಹಾಗೂ ಅದರ ಚಾಲಕನ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಕುರಿತು ಬಿಬಿಎಂಪಿ ಅಧಿಕಾರಿಗಳನ್ನೂ ವಿಚಾರಣೆ ನಡೆಸಲಾಗುವುದು’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.