ಬೆಂಗಳೂರು: ‘ಬಿಬಿಎಂಪಿಯ ಎಲ್ಲಾ ವಲಯಗಳ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್ಗಳು ಬೆಳಿಗ್ಗೆ 8ರಿಂದ 10ವರೆಗೆ ಕಡ್ಡಾಯವಾಗಿ ದ್ವಿಚಕ್ರ ವಾಹನಗಳಲ್ಲೇ ವಾರ್ಡ್ಗಳಲ್ಲಿ ಸುತ್ತಾಡಬೇಕು’ ಎಂದು ಮೇಯರ್ ಎಂ. ಗೌತಮ್ಕುಮಾರ್ ಸೂಚನೆ ನೀಡಿದರು.

ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಸಂಚರಿಸಿ ರಸ್ತೆ ಗುಂಡಿಗಳನ್ನು ಪರಿಶೀಲಿಸಿದ ಅವರು, ‘ಇಲಾಖೆಗಳ ಮುಖ್ಯಸ್ಥರು ಬೈಕ್ಗಳಲ್ಲಿ ಸಂಚರಿಸಿದರೆ ಸಾರ್ವಜನಿಕರ ಸಮಸ್ಯೆಗಳು ಅರಿವಿಗೆ ಬರುತ್ತವೆ. ಕಾರಿನಲ್ಲೇ ಸಂಚರಿಸುವ ನಮಗೆ ಬೈಕ್ ಸವಾರರ ಕಷ್ಟ ಅರ್ಥ ವಾಗದು. ಅದಕ್ಕಾಗಿ ನಾನು ಬೈಕ್ನಲ್ಲಿ ಸಂಚರಿಸಿದ್ದೇನೆ. ಸತ್ಯ ಹೇಳಬೇಕೆಂದರೆ ರಸ್ತೆಗಳ ಸ್ಥಿತಿ ಅತ್ಯಂತ ಕೆಟ್ಟದಾಗಿದ್ದು, ಬೆನ್ನುನೋವು ಆರಂಭವಾಗಿದೆ. ರಸ್ತೆ ಗುಂಡಿಗಳ ಮುಚ್ಚಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಮಾಧ್ಯಮಗಳಿಗೆ ತಿಳಿಸಿದರು.

‘ರಸ್ತೆ ಗುಂಡಿಗಳನ್ನು ಸರಿಯಾಗಿ ಮುಚ್ಚದಿದ್ದರೆ ಅದಕ್ಕೆ ಗುತ್ತಿಗೆದಾರರೇ ಜವಾಬ್ದಾರರು. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.