ಶುಕ್ರವಾರ, ನವೆಂಬರ್ 22, 2019
25 °C

ಮೇಯರ್ ಚುನಾವಣೆ: ಸಕಲ ಸಿದ್ಧತೆ

Published:
Updated:

ಬೆಂಗಳೂರು: ‘ಮೇಯರ್ ಹಾಗೂ ಉಪಮೇಯರ್ ಚುನಾವಣೆ ಸೆ.27ಕ್ಕೆ ನಡೆಯಲಿದ್ದು, ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ತಿಳಿಸಿದರು.

ಚುನಾವಣಾ ಸಿದ್ಧತೆ ಕುರಿತು ಬಿಬಿಎಂಪಿಯಲ್ಲಿ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು, ‘ಮೇಯರ್ ಹಾಗೂ ಉಪಮೇಯರ್ ಅವಧಿ ಸೆ. 28ಕ್ಕೆ ಮುಕ್ತಾಯಗೊಳ್ಳಲಿದೆ. ಈ ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಸೆ. 27ರ ಬೆಳಿಗ್ಗೆ 9ಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅಂದು ನಾಮಪತ್ರ ಪರಿಶೀಲನೆ ನಂತರ 11.30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದು’ ಎಂದರು. 

‘ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತದೆ’ ಎಂದು ತಿಳಿಸಿದರು.

 

ಪ್ರತಿಕ್ರಿಯಿಸಿ (+)