ಬುಧವಾರ, ಅಕ್ಟೋಬರ್ 23, 2019
27 °C

ಬಿಬಿಎಂಪಿ ಮೇಯರ್ ಚುನಾವಣೆ: ಕಾಂಗ್ರೆಸ್‌ನಿಂದ ಸತ್ಯನಾರಾಯಣ ಅಭ್ಯರ್ಥಿ

Published:
Updated:

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಮುಂದುವರಿಸಿವೆ. ಕಾಂಗ್ರೆಸ್‌ನಿಂದ ದತ್ತಾತ್ರೇಯ ವಾರ್ಡ್‌ನ ಸದಸ್ಯ ಆರ್‌.ಎಸ್‌.ಸತ್ಯನಾರಾಯಣ ಅವರನ್ನು ಮೇಯರ್‌ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ.

ಜೆಡಿಎಸ್‌ನಿಂದ ಶಕ್ತಿಗಣಪತಿ ನಗರ ವಾರ್ಡ್‌ನ ಗಂಗಮ್ಮ ಅವರನ್ನು ಉಪಮೇಯರ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ.

ಈ ಮಧ್ಯೆ, ಬಿಜೆಪಿಯಲ್ಲಿ ಮೇಯರ್ ಅಭ್ಯರ್ಥಿ ಆಯ್ಕೆ ಗೊಂದಲ ಕೊನೇ ಕ್ಷಣದವರೆಗೂ ಮುಂದುವರಿದಿತ್ತು. ಕೊನೆಗೆ, ಜೋಗುವಾಳ್ಯ ವಾರ್ಡ್‌ನ ಪಾಲಿಕೆ ಸದಸ್ಯ ಎಂ.ಗೌತಮ್ ಕುಮಾರ್‌ ಅವರನ್ನು ಮೇಯರ್‌ ಸ್ಥಾನಕ್ಕೆ ಮತ್ತು ಹೊಸಹಳ್ಳಿ ವಾರ್ಡ್‌ ಸದಸ್ಯೆ ಮಹಾಲಕ್ಷ್ಮೀ ರವೀಂದ್ರ ಅವರನ್ನು ಉಪ ಮೇಯರ್‌ ಅಭ್ಯರ್ಥಿಯನ್ನಾಗಿ ಮಂಗಳವಾರ ಬೆಳಿಗ್ಗೆ ಆಯ್ಕೆ ಮಾಡಲಾಗಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)