ಬೆಂಗಳೂರು: ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚದಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.

ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸೆ.6ರಿಂದ ಅನಿರೀಕ್ಷಿತ ತಪಾಸಣೆ ಆರಂಭಿಸಲಾಗುವುದು. ಗುಂಡಿ ಮುಚ್ಚದೆ ಇರುವುದು ಅಥವಾ ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಮುಲಾಜಿಲ್ಲದೆ ದಂಡ ವಿಧಿಸಲಾಗುವುದು. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದರು.

ಪಾಲಿಕೆಯ ಮುಖ್ಯ ಎಂಜಿನಿಯರ್ ಎಂ.ಆರ್.ವೆಂಕಟೇಶ್, ‘ನಿರ್ವಹಣಾ ಅವಧಿ ಬಾಕಿಯಿರುವ ರಸ್ತೆಗಳಲ್ಲಿನ ಗುಂಡಿಗಳನ್ನು ಗುತ್ತಿಗೆದಾರರಿಂದಲೇ ಮುಚ್ಚಿಸಲಾಗುತ್ತಿದೆ. ಅವಧಿ ಮುಗಿದ ಕಡೆ ಪಾಲಿಕೆಯಿಂದ ಮುಚ್ಚಲಾಗುತ್ತಿದೆ. ಗುಂಡಿಗಳನ್ನು ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಎಂಜಿನಿಯರ್ಗಳಿಗೆ ₹ 1 ಸಾವಿರ ದಂಡ ವಿಧಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.