ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಮತ್ತೊಂದು ವಾರ ಲಾಕ್‌ಡೌನ್‌ ವಿಸ್ತರಿಸಲು ಕೋರಿದ ಮೇಯರ್‌

Last Updated 17 ಜುಲೈ 2020, 6:34 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಾರ ಲಾಕ್‌ಡೌನ್‌ ವಿಸ್ತರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮೇಯರ್‌ ಎಂ. ಗೌತಮ್‌ ಕುಮಾರ್‌ ಅವರು ಗುರುವಾರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಕೋವಿಡ್‌–19 ಪ್ರಕರಣಗಳನ್ನು ನಿಯಂತ್ರಿಸಲು ಹೆಚ್ಚಿನ ಸಮಯ ಸಿಕ್ಕರೆ ಉತ್ತಮ. ಹೀಗಾಗಿ ಇನ್ನೂ ಒಂದು ವಾರದವರೆಗೆ ಲಾಕ್‌ಡೌನ್ ವಿಸ್ತರಿಸಲು ನಾವು ಬಯಸಿದ್ದೇವೆ. ಈ ಕುರಿತು ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ,’ ಎಂದು ಹೇಳಿದರು.

ಸದ್ಯ ಬೆಂಗಳೂರಿನಲ್ಲಿ ಜುಲೈ 14ರ ರಾತ್ರಿ 8 ರಿಂದ ಜು.22 ಬುಧವಾರ ಬೆಳಿಗ್ಗೆ 5 ಗಂಟೆಯವರೆಗೆ ಒಟ್ಟು 7 ದಿನಗಳ ಲಾಕ್‌ಡೌನ್‌ ಜಾರಿಯಲ್ಲಿದೆ.

ಗುರುವಾರ ಸಂಜೆ ಪ್ರಕಟವಾದ ಕೋವಿಡ್‌–19 ಬುಲೆಟಿನ್‌ನಲ್ಲಿ ಬೆಂಗಳೂರಿನಲ್ಲಿ ಒಂದೇ ದಿನ 2344 ಪ್ರಕರಣಗಳು ವರದಿಯಾಗಿದ್ದವು. ಸದ್ಯ ಬೆಂಗಳೂರಿನಲ್ಲಿ ಒಟ್ಟಾರೆ 25288 ಪ್ರಕರಣಗಳು ದೃಢವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT