ಬುಧವಾರ, ಸೆಪ್ಟೆಂಬರ್ 23, 2020
20 °C

ಬಿಬಿಎಂಪಿ: ಪಾಲಿಕೆ ಸದಸ್ಯ ಏಳುಮಲೈ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪಾಲಿಕೆ ಸದಸ್ಯ ವಿ.ಏಳುಮಲೈ (40)ಅವರು ಗುರುವಾರ ಮುಂಜಾನೆ 1.30ಕ್ಕೆ ನಿಧನರಾದರು.

ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

ಸಗಾಯಪುರ ವಾರ್ಡ್​ನಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಅವರಿಗೆ ತಿಂಗಳ ಹಿಂದೆ ಮೂಗಿನಲ್ಲಿ ಗುಳ್ಳೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ  ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಈ ವೇಳೆ ಅರಿವಳಿಕೆ ಮದ್ದು ನೀಡುವಾಗ ವ್ಯತ್ಯಯ ಉಂಟಾಗಿದ್ದರಿಂದ ಅವರ ಆರೋಗ್ಯ ಹದಗೆಟ್ಟಿತ್ತು. 28 ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದರು. 

ಬಿಬಿಎಂಪಿ ಸಮಾಜ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಏಳುಮಲೈ ನಿಧನದ ಕಾರಣ ಪಾಲಿಕೆ ಕಚೇರಿಗೆ ಗುರುವಾರ ಮತ್ತು ಶುಕ್ರವಾರ ರಜೆ ನೀಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು