ಶನಿವಾರ, ಜೂನ್ 6, 2020
27 °C

ವಲಸೆ ಕಾರ್ಮಿಕರ ಸಮಸ್ಯೆ ಆಲಿಸಿದ ಮೇಯರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಲಸೆ ಕಾರ್ಮಿಕರು ತಂಗಿರುವ ಪ್ಯಾಲೆಸ್ ಗ್ರೌಂಡ್ ಟೆನಿಸ್ ಪೆವಿಲಿಯನ್‌ಗೆ ಮೇಯರ್ ಎಂ.ಗೌತಮ್‌ಕುಮಾರ್ ಶುಕ್ರವಾರ ಭೇಟಿ ನೀಡಿ ಕುಂದು ಕೊರತೆ ಆಲಿಸಿದರು.

‘ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಕಾರ್ಮಿಕರನ್ನು ತಡೆದು ನಗರದ ನಾಲ್ಕು ಕಡೆ ತಂಗಲು ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ’ ಎಂದು ಮೇಯರ್ ತಿಳಿಸಿದರು.

‘ಒಡಿಶಾ, ಉತ್ತರ ಪ್ರದೇಶ, ತ್ರಿಪುರ, ಬಿಹಾರ ಸೇರಿ ಹಲವು ರಾಜ್ಯಗಳ ವಲಸೆ ಕಾರ್ಮಿಕರು ಇದ್ದಾರೆ. ಅವರನ್ನು ಊರಿಗೆ ಕಳುಹಿಸಿಕೊಡಲು ಆನ್‌ಲೈನ್ ಮೂಲಕ ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಲಾಗುತ್ತಿದೆ. ಕಾಯ್ದಿರಿಸಿರುವ ರೈಲು ಬಂದಾಗ ಪೊಲೀಸ್ ಸಿಬ್ಬಂದಿ ಅವರನ್ನು ಕರೆದೊಯ್ದು ರೈಲು ಹತ್ತಿಸಲಿದ್ದಾರೆ. ಪಾಲಿಕೆ ವತಿಯಿಂದ ಆರೋಗ್ಯ ತಪಾಸಣೆ ಕೂಡ ಮಾಡಲಾಗುತ್ತಿದೆ’ ಎಂದು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು