ಬೆಂಗಳೂರು: ‘ನಾವು ಓಟು ಹಾಕಿ ಗೆಲ್ಲಿಸಿರುವ ಜನಪ್ರತಿನಿಧಿಗಳು ನಮ್ಮ ನೋಟು ನುಂಗುತ್ತಿದ್ದಾರೆ. ಬೇರೆ ಬೇರೆ ರೂಪದಲ್ಲಿ ಹಣ ಖರ್ಚು ಮಾಡಿ ನಮ್ಮನ್ನೆಲ್ಲ ದೋಚುತ್ತಿದ್ದಾರೆ' ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದರು.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,’ ₹27.7 ಕೋಟಿಗೆ ಖರೀದಿಸಿದ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಬಳಕೆ, ಸ್ಟಾಕ್ ಪುಸ್ತಕಗಳ ನಿರ್ವಹಣೆಯಲ್ಲಿನ ವ್ಯತ್ಯಾಸ, ನಗದು ಪುಸ್ತಕದ ಅಸಮರ್ಪಕ ನಿರ್ವಹಣೆ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ‘ ಎಂದು ದೂರಿದರು.

’ಪ್ರಕರಣದ ಸಂಪೂರ್ಣ ತನಿಖೆ ಮುಗಿಯುವ ತನಕ ಈ ಅವ್ಯವಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು. ನಷ್ಟಕ್ಕೆ ಕಾರಣರಾದ ವ್ಯಕ್ತಿಗಳಿಂದ ಹಣವನ್ನು ವಸೂಲಿ ಮಾಡಬೇಕು. ಬೆಂಗಳೂರಿನ ಎಲ್ಲ ವಿಭಾಗಗಳು ಮತ್ತು 198 ವಾರ್ಡ್ಗಳಲ್ಲಿಯೂ ಇದೇ ರೀತಿಯ ಲೆಕ್ಕಪರಿಶೋಧನೆ ನಡೆಸಬೇಕು‘ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.