ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಬಿಎಂಪಿ ವ್ಯಾಪ್ತಿ | ನೀರಿನ ಗುಣಮಟ್ಟ ಪರಿಶೀಲಿಸಲು ತುಷಾರ್‌ ಗಿರಿನಾಥ್‌ ಸೂಚನೆ

Published 11 ಜೂನ್ 2024, 0:30 IST
Last Updated 11 ಜೂನ್ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಕೊಳವೆಬಾವಿಗಳಲ್ಲಿನ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಿ, ವರದಿ ಸಲ್ಲಿಸಲು ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚಿಸಿದರು.

ಅಧಿಕಾರಿಗಳ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಿರಂತರವಾಗಿ ನಡೆಸಬೇಕು. ಹೊಸದಾಗಿ ಸೃಷ್ಟಿಯಾಗುವ ರಸ್ತೆ ಗುಂಡಿಗಳನ್ನು ಗುರುತಿಸಿ ಕೂಡಲೇ ಮುಚ್ಚಬೇಕು. ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕಾಗಿ ಹೊಸ ತಂತ್ರಾಂಶವನ್ನು ಸಿದ್ಧಪಡಿಸಲಾಗುತ್ತಿದ್ದು, ಅದನ್ನು ತ್ವರಿತವಾಗಿ ಅನಾವರಣಗೊಳಿಸಬೇಕು ಎಂದು ಪ್ರಧಾನ ಎಂಜಿನಿಯರ್‌ಗೆ ಹೇಳಿದರು.

198 ಪ್ರವಾಹ ಪೀಡಿತ ಪ್ರದೇಶಗಳ ಜೊತೆಗೆ ಹೊಸದಾಗಿ 11 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಒಟ್ಟಾರೆ 209 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ 163 ಸ್ಥಳಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದ 46 ಸ್ಥಳಗಳಲ್ಲಿ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಪ್ರದೇಶಗಳ ಮೇಲೆ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ತೆರವುಗೊಳಿಸಿ: ನಗರದಾದ್ಯಂತ ಪಾದಚಾರಿ ಮಾರ್ಗಗಳಲ್ಲಿ ಶಾಶ್ವತ ಮಳಿಗೆಗಳನ್ನು ಅಳವಡಿಸಲಾಗಿದೆ. ಇದರಿಂದ ಪಾದಚಾರಿಗಳ ಓಡಾಟಕ್ಕೆ‌ ಸಾಕಷ್ಟು ಸಮಸ್ಯೆಯಾಗಿದೆ. ಪಾದಚಾರಿ ಮಾರ್ಗಗಳಲ್ಲಿರುವ ಶಾಶ್ವತ ನಿರ್ಮಾಣ ಅಥವಾ ಮಳಿಗೆಗಳನ್ನು ಎಲ್ಲ ವಲಯಗಳಲ್ಲೂ ತೆರವುಗೊಳಿಸಬೇಕ ಎಂದರು.

ವಿಶೇಷ ಆಯುಕ್ತರಾದ ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ ಕಲ್ಕೆರೆ, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ರಮೇಶ್, ರಮ್ಯಾ, ಪ್ರೀತಿ ಗೆಹ್ಲೋಟ್, ಕರೀಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT