ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ಎಸ್‌ಸಿ‌ಎಸ್‌ಪಿ/ಟಿ‌ಎಸ್‌ಪಿ ಕಲ್ಯಾಣ ಕಾರ್ಯಕ್ರಮ ಜಾರಿಗೆ ಸೂಚನೆ

Published 1 ಸೆಪ್ಟೆಂಬರ್ 2023, 16:02 IST
Last Updated 1 ಸೆಪ್ಟೆಂಬರ್ 2023, 16:02 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಸಿ‌ಎಸ್‌ಪಿ ಮತ್ತು ಟಿ‌ಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳನ್ನು ತಕ್ಷಣವೇ ಜಾರಿಗೊಳಿಸಲು ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಸೂಚಿಸಿದ್ದಾರೆ.

ಬಿಬಿಎಂಪಿ ಆಯವ್ಯಯದಲ್ಲಿ ಎಸ್‌ಸಿ‌ಎಸ್‌ಪಿ ಮತ್ತು ಟಿ‌ಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನವನ್ನು ಉಪಯೋಗಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕೊಳೆಗೇರಿ ಪ್ರದೇಶದಲ್ಲಿ ಅಗತ್ಯವಿರುವ ಮೂಲಸೌಲಭ್ಯಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಕೂಡಲೇ ರೂಪಿಸಲು  ಹೇಳಿದರು.

ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಎಸ್‌ಸಿ‌ಎಸ್‌ಪಿ ಮತ್ತು ಟಿ‌ಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಕೊಳಗೇರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಿದರು.

ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು, ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ, ಡಾ. ತ್ರಿಲೋಕ್ ಚಂದ್ರ  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT